ADVERTISEMENT

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ವೀರಶೈವ ಮಹಾಸಭಾ ವಿರೋಧ

ನಿರ್ಧಾರ ಹಿಂಪಡೆಯುವಂತೆ ಒತ್ತಾಯಿಸಲು ನಿರ್ಣಯ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 14:31 IST
Last Updated 23 ಮಾರ್ಚ್ 2018, 14:31 IST
ಡಾ. ಶಾಮನೂರು ಶಿವಶಂಕರಪ್ಪ (ಸಂಗ್ರಹ ಚಿತ್ರ)
ಡಾ. ಶಾಮನೂರು ಶಿವಶಂಕರಪ್ಪ (ಸಂಗ್ರಹ ಚಿತ್ರ)   

ಬೆಂಗಳೂರು: ಲಿಂಗಾಯತ ಮತ್ತು ಬಸವತತ್ವ ಒಪ್ಪುವ ವೀರಶೈವರಿಗೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ.

ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವ ನಿರ್ಧಾರ ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಲು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಅಲ್ಲದೆ, ‘ವೀರಶೈವ–ಲಿಂಗಾಯತ ಭೇದ ನಮಗಿಲ್ಲ. ಧರ್ಮ ಸ್ಥಾಪಕರು ಯಾರೆಂಬ ವಾದ–ವಿವಾದ ನಮಗೆ ಬೇಕಿಲ್ಲ. ಸಮಾಜ ಸಂಘಟನೆಯೇ ನಮ್ಮ ಗುರಿ. ಸಮಾಜ ಕಟ್ಟುವುದೇ ನಮ್ಮ ಕೆಲಸ ವಿನಹ ಒಡೆಯುವುದಲ್ಲ. ಈ ಬಗ್ಗೆ ಸಮಾಜದ ಬಂಧುಗಳು ಗೊಂದಲಕ್ಕೆ ಒಳಗಾಗದಂತೆ ಮನವಿ ಮಾಡಬೇಕು’ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

(ಅಖಿಲ ಭಾರತ ವೀರಶೈವ ಮಹಾಸಭಾದ ಪತ್ರಿಕಾ ಪ್ರಕಟಣೆ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.