ADVERTISEMENT

ಲಿಂಗಾಯತ ಸ್ವತಂತ್ರ ಧರ್ಮ: ಮುಖ್ಯಮಂತ್ರಿ ಭೇಟಿ ಮಾಡಿದ ಪ್ರಮುಖ ವಿರಕ್ತ ಮಠಾಧೀಶರು

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2018, 12:34 IST
Last Updated 18 ಮಾರ್ಚ್ 2018, 12:34 IST
ಲಿಂಗಾಯತ ಸ್ವತಂತ್ರ ಧರ್ಮ: ಮುಖ್ಯಮಂತ್ರಿ ಭೇಟಿ ಮಾಡಿದ ಪ್ರಮುಖ ವಿರಕ್ತ ಮಠಾಧೀಶರು
ಲಿಂಗಾಯತ ಸ್ವತಂತ್ರ ಧರ್ಮ: ಮುಖ್ಯಮಂತ್ರಿ ಭೇಟಿ ಮಾಡಿದ ಪ್ರಮುಖ ವಿರಕ್ತ ಮಠಾಧೀಶರು   

ಬೆಂಗಳೂರು: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಒತ್ತಾಯಿಸಿ ರಾಜ್ಯದ ಪ್ರಮುಖ ವಿರಕ್ತ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ  ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.

ವಿವಿಧ ಮಠಾಧೀಶರಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ನೇತೃತ್ವದ ತಜ್ಞರ ಸಮಿತಿಯ ವರದಿಯನ್ನು ತಡಮಾಡದೆ ಒಪ್ಪಿಕೊಂಡು ‘ಲಿಂಗಾಯತಕ್ಕೆ’ ಸ್ವತಂತ್ರ ಧರ್ಮದ ಮಾನ್ಯತೆ ನೀಡುವಂತೆ ವಿವಿಧ ಮಠಾಧೀಶರುಗಳು ಮನವಿ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ADVERTISEMENT

ಮಠಾಧೀಶರುಗಳ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಸಭೆಗೆ ಮುರುಘಾ ಶರಣರು, ಮಾತೇ ಮಹಾದೇವಿ ಸೇರಿದಂತೆ ಹಲವು ಮಠಾಧೀಶರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.