ADVERTISEMENT

ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2015, 20:28 IST
Last Updated 24 ಏಪ್ರಿಲ್ 2015, 20:28 IST

ಮೈಸೂರು: ನಿವೃತ್ತ ಐಎಎಸ್‌ ಅಧಿಕಾರಿಯ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಹಾಗೂ ವರಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಇಲ್ಲಿನ ಪ್ರತಿಷ್ಠಿತ ಆಸ್ಪತ್ರೆಯ ಮಾಲೀಕರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಯನ್ನು ನ್ಯಾಯಾಲಯ ಮುಂದೂಡಿದೆ.

ಆರೋಪಿಗಳ ಪರ ವಕೀಲ ಅರುಣ್‌ಕುಮಾರ್‌ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ರೂಪಾ ನಾಯಕ್‌ ಅವರು ಶುಕ್ರವಾರ ಕೈಗೆತ್ತಿಕೊಂಡರು. ಸರ್ಕಾರಿ ಅಭಿಯೋಜಕರು ಅರ್ಜಿಗೆ ತಕರಾರು ಸಲ್ಲಿಸಲು ಕಾಲಾವಕಾಶ ಕೋರಿದರು. ಹೀಗಾಗಿ, ನ್ಯಾಯಾಧೀಶರು ವಿಚಾರಣೆಯನ್ನು ಮಧ್ಯಾಹ್ನ 3, ಸಂಜೆ 4.15 ಹಾಗೂ 5 ಗಂಟೆಗೆ ಮುಂದೂಡಿದರು. ಸರ್ಕಾರಿ ಅಭಿಯೋಜಕರು ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದರು.

ಹೀಗಾಗಿ, ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ಸಂತ್ರಸ್ತೆಯ ಅತ್ತೆ–ಮಾವ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಶನಿವಾರಕ್ಕೆ ಮತ್ತು ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಭಾವನ ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ನ್ಯಾಯಾಧೀಶರು ಮುಂದೂಡಿದರು. ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಅಗತ್ಯ ಮಾಹಿತಿಗಳನ್ನು ವಿ.ವಿ.ಪುರಂ ಠಾಣೆಯ ಪೊಲೀಸರು ಶುಕ್ರವಾರ ಸಂಜೆ ಒದಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.