ADVERTISEMENT

ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2017, 20:01 IST
Last Updated 20 ಫೆಬ್ರುವರಿ 2017, 20:01 IST

ಮೈಸೂರು: ಜರ್ಮನಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಇಲ್ಲಿನ ಚಾಮುಂಡಿಬೆಟ್ಟದ ಮೆಟ್ಟಿಲು ಬಳಿ ಸೋಮವಾರ ರಾತ್ರಿ ನಡೆದಿದೆ.

7.30ರ ಸಮಯದಲ್ಲಿ ನಂದಿ ವಿಗ್ರಹದಿಂದ ಮೆಟ್ಟಿಲುಗಳ ಮೂಲಕ ಕೆಳಗೆ ಇಳಿಯುತ್ತಿದ್ದ ಮಹಿಳೆಯ ಮೊಬೈಲ್‌ ಕಿತ್ತುಕೊಳ್ಳಲು   ಆತ ಯತ್ನಿಸಿದ್ದಾನೆ. ಯುವತಿ ಪ್ರತಿರೋಧ ತೋರಿದಾಗ ಬಲವಂತವಾಗಿ ಆಕೆಗೆ ಚುಂಬಿಸಿ, ಕೈಹಿಡಿದು ಎಳೆದಾಡಿದ್ದಾನೆ. ಬಳಿಕ  ₹ 2 ಸಾವಿರ ನಗದು ಕಿತ್ತುಕೊಂಡು ಪರಾರಿಯಾಗಿದ್ದಾನೆ.

‘ಮೂರು ತಿಂಗಳ ಅವಧಿಗಾಗಿ ಭಾರತಕ್ಕೆ ಬಂದಿದ್ದ ಮಹಿಳೆಯು ಶುಕ್ರವಾರದಿಂದ ನಗರದಲ್ಲಿ ತಂಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್.ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಚೆಲುವಾಂಬ ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.