ADVERTISEMENT

ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ: ಮೌಲ್ವಿ ಬಂಧನ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2017, 19:57 IST
Last Updated 23 ಏಪ್ರಿಲ್ 2017, 19:57 IST

ಹೊಳೆಹೊನ್ನೂರು (ಭದ್ರಾವತಿ ತಾ.): ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ  ನೀಡುತ್ತಿದ್ದ ಆರೋಪದ ಮೇರೆಗೆ ಇಲ್ಲಿನ ನೂರಾನಿ ಮದರಸಾದ ಮೌಲ್ವಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ಸಲ್ಮಾನ್ ರಜಾಕ್ (30) ಬಂಧಿತ ಮೌಲ್ವಿ. ಇಲ್ಲಿ ಕಲಿಯುತ್ತಿದ್ದ ಮೂವರು ವಿದ್ಯಾರ್ಥಿಗಳ ಮೇಲೆ ಅವರು ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎನ್ನಲಾಗಿದ್ದು, ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಪೋಷಕರ ದೂರಿನ ಮೇರೆಗೆ ಹೊಳೆಹೊನ್ನೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT