ADVERTISEMENT

ವಿಧಾನ ಪರಿಷತ್‌: ನಾಮಫಲಕ ಬದಲು

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2015, 19:34 IST
Last Updated 24 ನವೆಂಬರ್ 2015, 19:34 IST

ಬೆಂಗಳೂರು: ವಿಧಾನ ಪರಿಷತ್ತಿನ ಪತ್ರಕರ್ತರ ಗ್ಯಾಲರಿಯ ಮೊದಲ ಸಾಲು ಇನ್ನು ಮುಂದೆ ವಿಧಾನಸಭೆ ಸದಸ್ಯರು ಮತ್ತು ಸಂಸದರಿಗೆ ಮೀಸಲು. ಸೋಮವಾರ ವಿಧಾನಸಭೆಯ ಅಧಿಕಾರಿಗಳ ಗ್ಯಾಲರಿಯಲ್ಲಿ ವಿಧಾನ ಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ ಅವರು ಕುಳಿತಿದ್ದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು.

ನಂತರ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ವಿಧಾನ ಪರಿಷತ್‌ ಮತ್ತು ಸಂಸದರಿಗೆ ಪತ್ರಕರ್ತರ ಗ್ಯಾಲರಿಯ ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು.

ಇದನ್ನೇ ಅನುಸರಿಸಿರುವ ವಿಧಾನ ಪರಿಷತ್‌, ಪತ್ರಕರ್ತರ ಗ್ಯಾಲರಿಯಲ್ಲಿ ವಿಧಾನ ಸಭೆಯ ಸದಸ್ಯರು ಮತ್ತು ಸಂಸತ್‌ ಸದಸ್ಯರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿದೆ. ಶಾಸಕರು ಮತ್ತು ಸಂಸದರಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸುವ ಸಂಬಂಧ ಈ ಮೊದಲು ಅಧಿಕಾರಿಗಳ ಗ್ಯಾಲರಿಯಲ್ಲಿ ಹಾಕಲಾಗಿದ್ದ ನಾಮಫಲಕ ಮಂಗಳವಾರ ಪತ್ರಕರ್ತರ ಗ್ಯಾಲರಿ ಬಳಿಗೆ ಸ್ಥಳಾಂತರಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.