ADVERTISEMENT

ವಿವಿಧ ಜಿಲ್ಲೆಗಳಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 27 ಮೇ 2015, 19:30 IST
Last Updated 27 ಮೇ 2015, 19:30 IST

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಬುಧವಾರ ಸಂಜೆ ಭಾರಿ ಮಳೆಯಾಗಿದ್ದು ಬಿಸಿಲಿನ ಝಳದಿಂದ ಬಳವಳಿದಿದ್ದ ಜನತೆಗೆ ತಂಪನೆರೆಯಿತು.

ಸಿಡಿಲು ಬಡಿದು ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನಲ್ಲಿ  ರಾಮೇನಹಳ್ಳಿ ನಿವಾಸಿ ಮಂಜಪ್ಪ ರಾಮಪ್ಪ ಬಾಗಲಿ (17) ಮೃತಪಟ್ಟಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಧಾರವಾಡ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ಆಲಮೇಲ ಸಮೀಪದ ದೇವಣಗಾಂವ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ, ಎತ್ತು ಮೃತಪಟ್ಟಿವೆ.

ವಿಜಯಪುರ ಜಿಲ್ಲೆಯ ಕೊಲ್ಹಾರ, ಗದಗ ಜಿಲ್ಲೆಯ ಮುಳಗುಂದ, ನರಗುಂದ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಹುನಗುಂದ, ಬಾಗಲಕೋಟೆ ತಾಲ್ಲೂಕುಗಳಲ್ಲಿ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.