ADVERTISEMENT

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ಮಧ್ಯಂತರ ತಡೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2015, 19:47 IST
Last Updated 6 ಅಕ್ಟೋಬರ್ 2015, 19:47 IST
ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ಮಧ್ಯಂತರ ತಡೆ
ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ಮಧ್ಯಂತರ ತಡೆ   

ಬೆಂಗಳೂರು: ವೈದ್ಯಕೀಯ ಪದವೀಧರರು ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯವಾಗಿ ಒಂದು ವರ್ಷ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕರ್ನಾಟಕ ಕಡ್ಡಾಯ ಸೇವೆ ಮತ್ತು ತರಬೇತಿ ಕಾಯ್ದೆ–2012ಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ರಾಜ್ಯ ಸರ್ಕಾರವು 2015ರ ಜುಲೈ 24ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿಗಳಾದ ಬುಶ್ರಾ ಅಬ್ದುಲ್‌ ಅಲೀಮ್‌ ಹಾಗೂ ಇತರೆ ವಿದೇಶಿ ವಿದ್ಯಾರ್ಥಿಗಳು ರಿಟ್‌ ಅರ್ಜಿ ಸಲ್ಲಿಸಿದ್ದರು.

ನ್ಯಾಯಮುರ್ತಿ ರವಿ ಮಳಿಮಠ ಅವರಿದ್ದ ಏಕಸದಸ್ಯ ಪೀಠವು  ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.