ADVERTISEMENT

ಶಾಶ್ವತ ಪುನರ್ವಸತಿಗಾಗಿ ಮನವಿ

ಬೈನಾ ನಿರಾಶ್ರಿತರಿಗೆ ಸಾಂತ್ವನ ಹೇಳಿದ ಹನುಮಂತಯ್ಯ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2015, 20:03 IST
Last Updated 4 ಅಕ್ಟೋಬರ್ 2015, 20:03 IST

ಕಾರವಾರ: ಗೋವಾದ ಬೈನಾ ನಿರಾಶ್ರಿತ ಕನ್ನಡಿಗರಿಗೆ ಮಾನವೀಯ ನೆಲೆಯಲ್ಲಿ ಗಂಜಿ ಕೇಂದ್ರ ತೆರೆಯಬೇಕು. ಅಲ್ಲದೇ ಶಾಶ್ವತ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್‌.ಹನುಮಂತಯ್ಯ ಭಾನುವಾರ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪರ್ಸೇಕರ್‌ ಅವರಿಗೆ ಮನವಿ ಸಲ್ಲಿಸಿದರು.

ಬಳಿಕ ಬೈನಾಕ್ಕೆ ತೆರಳಿ ನಿರಾಶ್ರಿತ ಕನ್ನಡಿಗರಿಗೆ ಸಾಂತ್ವನ ಹೇಳಿದ ಅವರು, ‘ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಿ
ಕೊಡಲು ಎಲ್ಲ ನೆರವನ್ನೂ ನೀಡಲು ಕರ್ನಾಟಕ ಸರ್ಕಾರ ಸಿದ್ಧವಿದೆ. ಬೀದಿಯಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಮಾನವೀಯ ದೃಷ್ಟಿಯಿಂದ ಸಹಾಯಕ್ಕೆ ಮುಂದಾಗಬೇಕು’ ಎಂದು ಸ್ಥಳೀಯರಲ್ಲಿ ಮನವಿ ಮಾಡಿದರು.

‘ಅನೇಕ ವರ್ಷಗಳಿಂದ ಗೋವಾದಲ್ಲಿ ವಾಸವಾಗಿರುವ ಕನ್ನಡಿಗರು ಇಲ್ಲಿನ ಪ್ರಜೆಗಳೇ ಆಗಿದ್ದಾರೆ. ಇವರನ್ನು ಸ್ಥಳೀಯ ಸರ್ಕಾರ ಪ್ರತ್ಯೇಕಿಸಿ ನೋಡುತ್ತಿರುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ಕೂಡಲೇ ಗೋವಾ ಸರ್ಕಾರ ನೆರವಿಗೆ ಮುಂದಾ
ಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.