ADVERTISEMENT

ಶಿವಮೊಗ್ಗ: ಕಲ್ಲು ತೂರಾಟ; ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2015, 13:25 IST
Last Updated 19 ಫೆಬ್ರುವರಿ 2015, 13:25 IST

ಶಿವಮೊಗ್ಗ: ನಗರದಲ್ಲಿ ಪೀಪಲ್ ಪ್ರಂಟ್ ಆಫ್ ಇಂಡಿಯಾ ಸಮಾವೇಶ ಅಂಗವಾಗಿ ಗುರುವಾರ ಆಯೋಜಿಸಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ಮಾಡಿ, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಪಿಪಿಐ ಇಲ್ಲಿನ ‘ಸೈನ್ಸ್ ಮೈದಾನ’ದಲ್ಲಿ ಸಮಾವೇಶ ಆಯೋಜಿಸಿತ್ತು. ಸಮಾವೇಶದ ಅಂಗವಾಗಿ ನಡೆದ ಮೆರವಣಿಗೆ ಸಾಗುತ್ತಿದ್ದಾಗ ಶಿವಪ್ಪ ವೃತ್ತದಲ್ಲಿ ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಎರಡು ಸುತ್ತು ಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿ ನಿಯಂತ್ರಿಸಿದ್ದಾರೆ. ನಂತರ ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆ ಕಾರ್ಯಕ್ರಮ ಜರುಗಿತು.

ನಗರದಲ್ಲಿ ಬಿಗುವಿನ ವಾತಾವರಣ ಇದ್ದುದರಿಂದ ಕೆಲ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸರು ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.