ADVERTISEMENT

ಸದಸ್ಯನ ಕಿವಿ ಕಚ್ಚಿದ ಪಂಚಾಯಿತಿ ಅಧ್ಯಕ್ಷೆ ಪತಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2017, 19:57 IST
Last Updated 17 ನವೆಂಬರ್ 2017, 19:57 IST
ಸದಸ್ಯನ ಕಿವಿ ಕಚ್ಚಿದ ಪಂಚಾಯಿತಿ ಅಧ್ಯಕ್ಷೆ ಪತಿ
ಸದಸ್ಯನ ಕಿವಿ ಕಚ್ಚಿದ ಪಂಚಾಯಿತಿ ಅಧ್ಯಕ್ಷೆ ಪತಿ   

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮಣಿ ಅವರ ಪತಿ ಪರಮೇಶ್ ಅವರು ಪಂಚಾಯಿತಿ ಸದಸ್ಯ ಜಗದೀಶ್ ಬಾಬು ಅವರ ಕಿವಿಯನ್ನು ಕಚ್ಚಿ ತುಂಡರಿಸಿದ್ದಾರೆ. ಬಾಬು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ಪತ್ನಿಯ ಅಧಿಕಾರವನ್ನು ಚಲಾಯಿಸಿ ಪರಮೇಶ್, ಪಂಚಾಯಿತಿಯಲ್ಲಿ ಅವ್ಯವಹಾರ ನಡೆಸಿದ್ದಾರೆ. ಕಚೇರಿಗೆ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ನಾನು ಆಗ್ರಹಿಸಿದ್ದೆ. ಇದಕ್ಕೆ ಈ ಕೃತ್ಯ ಎಸಗಿದ್ದಾರೆ’ ಎಂದು ಬಾಬು ದೂರಿದ್ದಾರೆ.

‘ಜಗದೀಶ್ ಬಾಬು 2010-11ನೇ ಸಾಲಿನಲ್ಲಿ ನಡೆದಿದ್ದ ಕಾಮಗಾರಿಗೆ ಅಕ್ರಮವಾಗಿ ಬಿಲ್ ಮಾಡಿಕೊಡುವಂತೆ ಒತ್ತಾಯಿಸಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯವಾಗಿ ನಿಂದಿಸಿದರು. ಏಕಾಏಕಿ ಹಲ್ಲೆ ನಡೆಸಿದರು’ ಎಂದು ಪರಮೇಶ್‌ ತಿಳಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.