ADVERTISEMENT

ಸಿಎಂ ಸಮಾವೇಶ: ಟೋಲ್‌ಗೇಟ್‌ಗಳಲ್ಲಿ ಶುಲ್ಕ ವಿನಾಯಿತಿ!

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 20:00 IST
Last Updated 21 ಸೆಪ್ಟೆಂಬರ್ 2017, 20:00 IST
ಗಂಗಾವತಿ ತಾಲ್ಲೂಕಿನಲ್ಲಿರುವ ಟೋಲ್‌ಗೇಟ್‌
ಗಂಗಾವತಿ ತಾಲ್ಲೂಕಿನಲ್ಲಿರುವ ಟೋಲ್‌ಗೇಟ್‌   

ಗಂಗಾವತಿ (ಕೊಪ್ಪಳ ಜಿಲ್ಲೆ): ಸೆ. 22 ರ ಶುಕ್ರವಾರ ಕೊಪ್ಪಳದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲಿದ್ದು, ತಾಲ್ಲೂಕಿನ ಮರಳಿ ಹಾಗೂ ಹೇಮಗುಡ್ಡ ಟೋಲ್‌ಗೇಟ್‌ಗಳಲ್ಲಿ ಸಂಚರಿಸುವ ಸರ್ಕಾರದ ಎಲ್ಲ ಇಲಾಖೆಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಸಮಾವೇಶದಲ್ಲಿ ಪಾಲ್ಗೊಳ್ಳುವ ಎಲ್ಲ ಬಗೆಯ ವಾಹನಗಳಿಗೆ ಟೋಲ್‌ ಶುಲ್ಕ ವಿನಾಯಿತಿ ನೀಡಲಾಗಿದೆ.

ತಾಲ್ಲೂಕಿನಿಂದ ಸುಮಾರು 250ಕ್ಕೂ ಹೆಚ್ಚು ಸಾರಿಗೆ ಸಂಸ್ಥೆಯ ಬಸ್ಸುಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ವಾಹನಗಳಿಗೂ ಈ ವಿನಾಯಿತಿ ಅನ್ವಯವಾಗಲಿದೆ. ಜಿಲ್ಲಾಧಿಕಾರಿ ಈ ಬಗ್ಗೆ ಟೋಲ್ ಸಂಸ್ಥೆಯ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಸಮಾವೇಶದ ಬ್ಯಾನರ್, ಅಥವಾ ಪೋಸ್ಟರ್ ಇರುವ ವಾಹನಗಳಿಂದ ಶುಲ್ಕ ಸಂಗ್ರಹಿಸದಂತೆ ಸೂಚನೆ ನೀಡಲಾಗಿದೆ ಎಂದು ಟೋಲ್‌ಗೇಟ‌್ ಸಿಬ್ಬಂದಿಯೊಬ್ಬರು ಖಚಿತಪಡಿಸಿದ್ದಾರೆ.

ಸಮಾವೇಶಕ್ಕಾಗಿ  ₹ 3 ಲಕ್ಷ ಟೋಲ್ ಶುಲ್ಕ ವಿನಾಯಿತಿ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.