ADVERTISEMENT

ಸುನಿಲ್‌ ಬೋಸ್‌ ವಿರುದ್ಧದ ಪ್ರಕರಣ: ಸಮನ್ಸ್‌ಗೆ ತಡೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 19:31 IST
Last Updated 21 ಸೆಪ್ಟೆಂಬರ್ 2017, 19:31 IST

ಬೆಂಗಳೂರು: ಮರಳು ಸಾಗಣೆಗೆ ಅನುಮತಿ ನೀಡಲು ಲಂಚ ಪಡೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಕುಮ್ಮಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಹಾಗೂ ಅವರ ಸ್ನೇಹಿತ ರಾಜು ಅವರನ್ನು ಆರೋಪಿಯಾಗಿಸಿ ಮೈಸೂರಿನ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ ನೀಡಿದೆ.

ಸಮನ್ಸ್ ರದ್ದುಕೋರಿ ಸುನಿಲ್ ಬೋಸ್ ಮತ್ತು ರಾಜು ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ವಕೀಲರು, ‘ಕಕ್ಷಿದಾರರ ವಿರುದ್ಧ ಸಾಕ್ಷ್ಯಾಧಾರ ಇಲ್ಲದಿದ್ದರೂ ಸಮನ್ಸ್ ಜಾರಿ ಮಾಡಲಾಗಿದೆ. ಆದ್ದರಿಂದ ಈ ಸಮನ್ಸ್‌ಗೆ ತಡೆ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅಧೀನ ನ್ಯಾಯಾಲಯ ನೀಡಿದ್ದ ಸಮನ್ಸ್‌ಗೆ ತಡೆ ನೀಡಿ, ವಿಚಾರಣೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.