ADVERTISEMENT

ಸುಳ್ಯದ ಮಾಜಿ ಶಾಸಕ ಬಾಕಿಲ ಹುಕ್ರಪ್ಪ ನಿಧನ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2017, 8:50 IST
Last Updated 20 ನವೆಂಬರ್ 2017, 8:50 IST
ಸುಳ್ಯದ ಮಾಜಿ ಶಾಸಕ ಬಾಕಿಲ ಹುಕ್ರಪ್ಪ ನಿಧನ
ಸುಳ್ಯದ ಮಾಜಿ ಶಾಸಕ ಬಾಕಿಲ ಹುಕ್ರಪ್ಪ ನಿಧನ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೀಸಲು (ಪರಿಶಿಷ್ಟ ಜಾತಿ) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಾಕಿಲ ಹುಕ್ರಪ್ಪ (68) ಸೋಮವಾರ ಬೆಳಗ್ಗಿನ ಜಾವ ನಿಧನರಾದರು.

ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹುಕ್ರಪ್ಪ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ಮನೆಗೆ ಕರೆತರಲಾಗಿತ್ತು.

ಬಾಕಿಲ ಹುಕ್ರಪ್ಪ ಅವರು 1983ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. 1983ರಿಂದ 1985ರವರೆಗೆ ಶಾಸಕರಾಗಿದ್ದರು. 1985ರ ಚುನಾವಣೆಯಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ನಂತರ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ, ಆಮ್‌ ಆದ್ಮಿ ಪಕ್ಷಗಳನ್ನು ಸೇರಿದ್ದರು. ಕೆಲವು ತಿಂಗಳ ಹಿಂದೆ ಮತ್ತೆ ಕಾಂಗ್ರೆಸ್‌ ಪಕ್ಷ ಸೇರಿದ್ದರು.

ADVERTISEMENT

ಶಾಸಕ ಸ್ಥಾನದಿಂದ ಇಳಿದ ಬಳಿಕ ಅವರು ಬಡತನದ ಕಾರಣಕ್ಕೆ ಕೂಲಿ ಕೆಲಸ ಮಾಡುತ್ತಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಸತತ ಸೋಲು ಅನುಭವಿಸಿದ ಬಳಿಕ ಸುಳ್ಯ ತಾಲ್ಲೂಕಿನ ಗುತ್ತಿಗಾರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಸದಸ್ಯರಾಗಿ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.