ADVERTISEMENT

ಸೈಟಸ್ ಇನ್ವರ್ಸಸ್ ಯಶಸ್ವಿ ಶಸ್ತ್ರಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2016, 20:18 IST
Last Updated 29 ಜೂನ್ 2016, 20:18 IST

ರಾಣೆಬೆನ್ನೂರು (ಹಾವೇರಿ ಜಿಲ್ಲೆ): ಸೈಟಸ್ ಇನ್ವರ್ಸಸ್ ಎಂಬ ಅಪರೂಪದ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ನಗರದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಇಲ್ಲಿನ ವಿನಾಯಕ ನಗರದ ಲಕ್ಷ್ಮೀ ಎಲುಬು, ಕೀಲು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಡಾ.ಸಂಜೀವ ಮುದ್ರಿ ಮತ್ತು ಡಾ.ವಿನಯಕುಮಾರ ದುಬೆ, ಸಣ್ಣ ಕರುಳು ಮತ್ತು ದೊಡ್ಡ ಕರುಳಿನಲ್ಲಿ ಕೊಳೆತ ಭಾಗ ಕತ್ತರಿಸಿ, ಸುಗಮ ಸಂಚಾರ ಸಾಧ್ಯವಿರುವ ಸಣ್ಣ ಕರುಳನ್ನು ದೊಡ್ಡ ಕರುಳಿಗೆ ಮರು ಜೋಡಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ರೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.