ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆ: ಮಾರ್ಕರ್‌ ಪೆನ್‌ ಬಳಕೆಗೆ ಒಲವು

​ಪ್ರಜಾವಾಣಿ ವಾರ್ತೆ
Published 21 ಜುಲೈ 2017, 19:45 IST
Last Updated 21 ಜುಲೈ 2017, 19:45 IST
ಸ್ಥಳೀಯ ಸಂಸ್ಥೆ ಚುನಾವಣೆ: ಮಾರ್ಕರ್‌ ಪೆನ್‌ ಬಳಕೆಗೆ ಒಲವು
ಸ್ಥಳೀಯ ಸಂಸ್ಥೆ ಚುನಾವಣೆ: ಮಾರ್ಕರ್‌ ಪೆನ್‌ ಬಳಕೆಗೆ ಒಲವು   

ಮೈಸೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಳಿಸಲಾಗದ ಶಾಯಿ ಬದಲಿಗೆ ಮಾರ್ಕರ್‌ ಪೆನ್‌ ಬಳಸುವ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಾಚಾರಿ ಅವರು ಮೈಸೂರು ಪೇಂಟ್ಸ್‌ ಅಂಡ್‌ ವಾರ್ನಿಷ್‌ ಲಿಮಿಟೆಡ್‌ಗೆ ಶುಕ್ರವಾರ ಭೇಟಿ ನೀಡಿ ಅದರ ಸಾಧಕ–ಬಾಧಕಗಳನ್ನು ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಪಾಲಿಕೆಗಳಿಗೆ 2018ರಲ್ಲಿ ಚುನಾವಣೆ ನಡೆಯಲಿದೆ. ಮತದಾರರ ಬೆರಳಿಗೆ ಶಾಯಿ ಬದಲಿಗೆ ಪೆನ್‌ ಬಳಕೆ ಮಾಡುವ ಚಿಂತನೆ ಇದೆ. ಇದರ ತಯಾರಿಕೆ, ಗುಣಮಟ್ಟ ಹಾಗೂ ದರ ವ್ಯತ್ಯಾಸದ ಕುರಿತು ಚರ್ಚಿಸಲು ಬಂದಿದ್ದೇನೆ’ ಎಂದು ಹೇಳಿದರು.

‘ಅಳಿಸಲಾಗದ ಮಾರ್ಕರ್‌ ಪೆನ್ನೊಂದನ್ನು ಸಾವಿರ ಮತದಾರರಿಗೆ ಬಳಕೆ ಮಾಡಲು ಸಾಧ್ಯವಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಮತದಾನ ಪ್ರಮಾಣ ಸಾಮಾನ್ಯವಾಗಿ ಹೆಚ್ಚಾಗಿರುತ್ತದೆ. ಇದಕ್ಕೆ ಅನುಗುಣವಾಗಿ ಪೆನ್‌ಗಳ ಅಗತ್ಯವಿದೆ. ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಈಗಾಗಲೇ ಇದು ಬಳಕೆಯಾಗಿದೆ’ ಎಂದರು.

ADVERTISEMENT

ಕ್ಷೇತ್ರ ಪುನರ್‌ ವಿಂಗಡಣೆ
ರಾಜ್ಯದ 100 ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪುನರ್‌ ವಿಂಗಡಣೆ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದರು.

‘ಪುರಸಭೆ, ನಗರಸಭೆ ಹಾಗೂ ಪಾಲಿಕೆಯ ಕ್ಷೇತ್ರ ಪುನರ್‌ ವಿಂಗಡಣೆ ಮಾಡಿ ಆಯೋಗಕ್ಕೆ ಕಳುಹಿಸುವಂತೆ ಸರ್ಕಾರಕ್ಕೆ ಕೋರಿಕೆ ಸಲ್ಲಸಲಾಗಿತ್ತು. ಇನ್ನುಳಿದ ಸಂಸ್ಥೆಗಳ ಕ್ಷೇತ್ರ ಪುನರ್‌ ವಿಂಗಡಣೆ ಕೂಡ ಪ್ರಗತಿಯಲ್ಲಿದೆ’ ಎಂದು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.