ADVERTISEMENT

ಸ್ಪರ್ಧೆಗೆ ಮೊದಲು ಮಹದಾಯಿ ಸಮಸ್ಯೆ ಬಗೆಹರಿಸಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 20:01 IST
Last Updated 21 ಸೆಪ್ಟೆಂಬರ್ 2017, 20:01 IST
ಸ್ಪರ್ಧೆಗೆ ಮೊದಲು ಮಹದಾಯಿ ಸಮಸ್ಯೆ ಬಗೆಹರಿಸಿ
ಸ್ಪರ್ಧೆಗೆ ಮೊದಲು ಮಹದಾಯಿ ಸಮಸ್ಯೆ ಬಗೆಹರಿಸಿ   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸುವುದಕ್ಕೆ ಮುನ್ನ ಮಹದಾಯಿ ನೀರಿನ ಸಮಸ್ಯೆ ಬಗೆಹರಿಸಬೇಕೆಂದು  ನವಲಗುಂದ ಶಾಸಕ ಎನ್‌.ಎಚ್‌.ಕೋನರಡ್ಡಿ ಒತ್ತಾಯಿಸಿದರು.

’ನಮ್ಮ ಭಾಗದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಒಲವು ತೋರದ ಈ ನಾಯಕರಿಗೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಉತ್ತರ ಕರ್ನಾಟಕ ನೆನಪಾಗಿದೆ’ ಎಂದು ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಟೀಕಿಸಿದರು.

‘ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ  ಎಚ್‌.ಡಿ.ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಯನ್ನು ಬಗೆಹರಿಸುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ವಾಸ್ಯವ್ತ ಹೂಡಿದರು. ಅದನ್ನು ಗಿಮಿಕ್‌ ಎಂದು ಈ ಇಬ್ಬರೂ ನಾಯಕರು ವ್ಯಂಗ್ಯವಾಡಿದ್ದರು. ಉತ್ತರ ಕರ್ನಾಟಕದ ಜನ ಜೆಡಿಎಸ್‌ ಬಗ್ಗೆ ಒಲವು ತೋರುತ್ತಿರುವುದರಿಂದ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ನಡುಕವುಂಟಾಗಿದೆ’ ಎಂದು ತಿಳಿಸಿದರು.

ADVERTISEMENT

ಸರ್ವಪಕ್ಷ ಸಭೆಯಲ್ಲಿ ಮಹದಾಯಿ ಮತ್ತು ಕಳಸಾ–ಬಂಡೂರಿ ಸಮಸ್ಯೆ ಇತ್ಯರ್ಥಕ್ಕೆ ಮಾತುಕತೆಗೆ ಬರಲು ಗೋವಾ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಬಿಜೆಪಿ ನಾಯಕರು ತಿಳಿಸಿದ್ದರು. ಇಲ್ಲಿಯವರೆಗೆ ಬಿಜೆಪಿ ಕಾರ್ಯಪ್ರವೃತ್ತವಾಗಿಲ್ಲ. ತಕ್ಷಣವೇ ಕ್ರಮ ತೆಗೆದುಕೊಳ್ಳದೇ ಇದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕೋನರಡ್ಡಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.