ADVERTISEMENT

ಹತ್ಯೆಗಾಗಿ ಜಾನುವಾರು ಮಾರಾಟಕ್ಕೆ ನಿರ್ಬಂಧ: ಕೇಂದ್ರದ ಆದೇಶ ಕೈ ಸೇರಿದ ಬಳಿಕ ಕ್ರಮ–ಸಿಎಂ

​ಪ್ರಜಾವಾಣಿ ವಾರ್ತೆ
Published 27 ಮೇ 2017, 7:54 IST
Last Updated 27 ಮೇ 2017, 7:54 IST
ಹತ್ಯೆಗಾಗಿ ಜಾನುವಾರು ಮಾರಾಟಕ್ಕೆ ನಿರ್ಬಂಧ: ಕೇಂದ್ರದ ಆದೇಶ ಕೈ ಸೇರಿದ ಬಳಿಕ ಕ್ರಮ–ಸಿಎಂ
ಹತ್ಯೆಗಾಗಿ ಜಾನುವಾರು ಮಾರಾಟಕ್ಕೆ ನಿರ್ಬಂಧ: ಕೇಂದ್ರದ ಆದೇಶ ಕೈ ಸೇರಿದ ಬಳಿಕ ಕ್ರಮ–ಸಿಎಂ   

ಕಲಬುರ್ಗಿ: ಕೊಲ್ಲುವ ಉದ್ದೇಶಕ್ಕಾಗಿ ಪ್ರಾಣಿಗಳ ಮಾರುಕಟ್ಟೆಯಲ್ಲಿ ಜಾನುವಾರುಗಳನ್ನು ಮಾರಾಟ ಮಾಡುವುದರ ಮೇಲೆ ನಿಷೇಧ ಹೇರಿರುವ ಕೇಂದ್ರ ಸರ್ಕಾರ ಆದೇಶ ಕೈಸೇರಿದ ನಂತರ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ ಎಂದರು.

ಇದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೊಳಪಡುವ ವಿಷಯ. ಹೀಗಾಗಿ, ಆತುರದ ನಿರ್ಧಾರ ಇಲ್ಲ ಎಂದು ಸಿಎಂ ಹೇಳಿದರು.

ADVERTISEMENT

ಕೇಂದ್ರ ಸರ್ಕಾರ ಅಧಿಸೂಚನೆ:
‘ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಜಾನುವಾರು ಮಾರುಕಟ್ಟೆಗಳ ನಿಯಂತ್ರಣ) ನಿಯಮ–2017’ ಅನ್ನು ಅಂತಿಮಗೊಳಿಸಿ ಕೇಂದ್ರ ಪರಿಸರ ಸಚಿವಾಲಯ ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. ಆದೇಶದ ಅನ್ವಯ, ಜಾನುವಾರುಗಳನ್ನು ಕೃಷಿ ಉದ್ದೇಶಕ್ಕೆ ಮಾತ್ರ ಖರೀದಿಸಬಹುದಾಗಿದೆ. ಈ ನಿರ್ಧಾರವು ದೇಶದ ಮಾಂಸ ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.