ADVERTISEMENT

‘ಹಿಂದೂ– ಮುಸ್ಲಿಂ ಧರ್ಮದ ನಡುವಿನ ಚುನಾವಣೆ’ ಹೇಳಿಕೆ: ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 12:05 IST
Last Updated 20 ಏಪ್ರಿಲ್ 2018, 12:05 IST
ಬಿಜೆಪಿ ಶಾಸಕ ಸಂಜಯ ಪಾಟೀಲ
ಬಿಜೆಪಿ ಶಾಸಕ ಸಂಜಯ ಪಾಟೀಲ   

ಬೆಳಗಾವಿ: ‘ಈ ಬಾರಿಯ ಚುನಾವಣೆ ನಡೆಯುವುದು ರಸ್ತೆ, ಚರಂಡಿ, ಕುಡಿಯುವ ನೀರಿಗಲ್ಲ; ಹಿಂದೂ–ಮುಸ್ಲಿಂ ಧರ್ಮದ ಮಧ್ಯೆ ನಡೆಯುತ್ತಿದೆ..’ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಂಜಯ ಪಾಟೀಲ ವಿರುದ್ಧ ಪ್ರಚೋಧನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ.

ಭಾರತೀಯ ದಂಡ ಸಂಹಿತೆಯ(ಐಪಿಸಿ) 253ಎ, 259ಎ ಸೆಕ್ಷನ್‌ಗಳ ಅಡಿಯಲ್ಲಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಮರಿಹಾಳ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ADVERTISEMENT

ಕೋಮು ಭಾವನೆ ಕೆರಳಿಸುವ ಭಾಷಣ ಮಾಡಿ ಚುನಾವಣೆ ನೀಡಿ ಸಂಹಿತೆ ಉಲ್ಲಂಘಿಸಿರುವುದರಿಂದ ಪಾಟೀಲರ ಅಭ್ಯರ್ಥಿತ್ವವನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ಹಲವರು ದೂರು ನೀಡಿದ್ದರು.

ಕರ್ನಾಟಕ ವಿಧಾನಸಭೆ ಚುನಾವಾಣೆ ಮೇ 12ರಂದು ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.