ADVERTISEMENT

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಸುಧೀರ್ ಸರಾಫ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2018, 9:06 IST
Last Updated 3 ಮಾರ್ಚ್ 2018, 9:06 IST
ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಬಿಜೆಪಿಯ ಸುಧೀರ್ ಸರಾಫ್ ಮತ್ತು ಉಪ ಮೇಯರ್ ಆಗಿ ಮೇನಕಾ ಹುರಳಿ ಆಯ್ಕೆ
ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಬಿಜೆಪಿಯ ಸುಧೀರ್ ಸರಾಫ್ ಮತ್ತು ಉಪ ಮೇಯರ್ ಆಗಿ ಮೇನಕಾ ಹುರಳಿ ಆಯ್ಕೆ   

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ನೂತನ ಮೇಯರ್ ಆಗಿ ಬಿಜೆಪಿಯ ಸುಧೀರ್ ಸರಾಫ್ ಮತ್ತು ಉಪ ಮೇಯರ್ ಆಗಿ ಮೇನಕಾ ಹುರಳಿ ಆಯ್ಕೆಯಾಗಿದ್ದಾರೆ.

ಮೇಯರ್ ಮತ್ತು ಉಪ ಮೇಯರ್ ಪರವಾಗಿ ತಲಾ 41 ಹಾಗೂ ವಿರುದ್ಧವಾಗಿ 23 ಮತಗಳು ಚಲಾವಣೆಯಾಗಿವೆ ಎಂದು ಚುನಾವಣಾ ಅಧಿಕಾರಿ, ಬೆಳಗಾವಿ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಘೋಷಿಸಿದರು.

ಚುನಾವಣೆ ವೇಳೆ ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಅವರು ಹಾಜರಿದ್ದರು.

ADVERTISEMENT

ಸಂಸದ ಪ್ರಹ್ಲಾದ ಜೋಶಿ, ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್, ಶಾಸಕರಾದ ಅಬ್ಬಯ್ಯ ಪ್ರಸಾದ, ವಿಧಾನ ಪರಿಷತ್ ಸದಸ್ಯರಾದ ಶ್ರೀನಿವಾಸ ಮಾನೆ, ಪ್ರದೀಪ ಶೆಟ್ಟರ್, ವಿ.ಎಸ್.ಸಂಕನೂರ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಚಲಾಯಿಸಿದರು. 

ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.