ADVERTISEMENT

ಹುಬ್ಬಳ್ಳಿ: ಸಹಾಯಕ ಆಯುಕ್ತ ಕರಿಯಪ್ಪ ಕರ್ನಲ್ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2017, 6:29 IST
Last Updated 28 ಫೆಬ್ರುವರಿ 2017, 6:29 IST
ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ
ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ   

ಹುಬ್ಬಳ್ಳಿ: ವಿಶ್ವೇಶ್ವರನಗರ ನಿವಾಸಿ, ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಕರಿಯಪ್ಪ ಕರ್ನಲ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿದ್ದಾರೆ.

ಧಾರವಾಡ, ಹಾವೇರಿ ಮತ್ತು ವಿಜಯಪುರದ ಎಸಿಬಿಯ ಮೂರು ಪ್ರತ್ಯೇಕ ತಂಡಗಳು ಕರಿಯಪ್ಪ ಕರ್ನಲ್ ಮನೆ, ನವನಗರದ ಕಚೇರಿ ಮತ್ತು ಬಿಡ್ನಾಳದಲ್ಲಿರುವ ಕರಿಯಪ್ಪ ಅವರ ಸ್ನೇಹಿತ ನಿರಂಜನ ಹಿರೇಮಠ ಅವರ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿವೆ.

40 ವರ್ಷ ಕರ್ತವ್ಯ ನಿರ್ವಹಿಸಿರುವ ಕರಿಯಪ್ಪ ಅವರು ಬರುವ ಜೂನ್‌ನಲ್ಲಿ ನಿವೃತ್ತಿ ಹೊಂದಲಿದ್ದಾರೆ‌.

ADVERTISEMENT

ಅಧಿಕಾರಿಗಳು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಎಸಿಬಿ ಡಿಎಸ್ಪಿ ಮುದರಡ್ಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.