ADVERTISEMENT

ಹೈ–ಕ ಭಾಗದಲ್ಲಿ ಅತಿವೃಷ್ಟಿ, 35ಸಾವಿರ ಹೆಕ್ಟೇರ್ ಬೆಳೆ ಹಾನಿ

ಕೃಷಿ ಇಲಾಖೆಯಿಂದ ಪ್ರಾಥಮಿಕ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2016, 19:30 IST
Last Updated 26 ಸೆಪ್ಟೆಂಬರ್ 2016, 19:30 IST
ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕು ಗುಂಡಗರ್ತಿ ಗ್ರಾಮದ ಹೊಲಕ್ಕೆ ಕಾಗಿಣಾ ನದಿ ನೀರು ನುಗ್ಗಿದ್ದರಿಂದ ತೊಗರಿ ಬೆಳೆ ಹಾನಿಯಾಗಿರುವುದು   --–ಪ್ರಜಾವಾಣಿ ಚಿತ್ರ – ಪ್ರಶಾಂತ್‌ ಎಚ್‌.ಜಿ.
ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕು ಗುಂಡಗರ್ತಿ ಗ್ರಾಮದ ಹೊಲಕ್ಕೆ ಕಾಗಿಣಾ ನದಿ ನೀರು ನುಗ್ಗಿದ್ದರಿಂದ ತೊಗರಿ ಬೆಳೆ ಹಾನಿಯಾಗಿರುವುದು --–ಪ್ರಜಾವಾಣಿ ಚಿತ್ರ – ಪ್ರಶಾಂತ್‌ ಎಚ್‌.ಜಿ.   

ಕಲಬುರ್ಗಿ: ಜಿಲ್ಲೆಯಾದ್ಯಂತ ಐದು ದಿನ ಸುರಿದ ಧಾರಾಕಾರ ಮಳೆಯಿಂದ ಅಂದಾಜು 35,086 ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಕೃಷಿ ಇಲಾಖೆಯು ಮುಂಗಾರು ಹಂಗಾಮಿಗೆ 5.69 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಿತ್ತು. ಆದರೆ ತೊಗರಿ ಬೆಳೆಯುವ ರೈತರ ಸಂಖ್ಯೆ ಹೆಚ್ಚಾದ ಪರಿಣಾಮ ಬಿತ್ತನೆ ಪ್ರದೇಶ 5,89,064 ಹೆಕ್ಟೇರ್‌ಗೆ ವಿಸ್ತರಣೆಯಾಗಿತ್ತು. ಈ ಪೈಕಿ 3,97,025 ಹೆಕ್ಟೇರ್‌ನಲ್ಲಿ ತೊಗರಿ ಬಿತ್ತನೆ ಮಾಡಲಾಗಿತ್ತು. ಧಾರಾಕಾರ ಮಳೆಯಿಂದಾಗಿ 35,086 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಇದರಲ್ಲಿ ತೊಗರಿ ಪ್ರದೇಶ 25,655 ಹೆಕ್ಟೇರ್ ಆಗಿದೆ.

‘ಚಿಂಚೋಳಿ ಮತ್ತು ಆಳಂದ ತಾಲ್ಲೂಕುಗಳಲ್ಲಿ ಉದ್ದು, ಸೋಯಾಬಿನ್, ಕಲಬುರ್ಗಿ, ಚಿತ್ತಾಪುರ, ಸೇಡಂ, ಜೇವರ್ಗಿ ಮತ್ತು ಅಫಜಲಪುರ ತಾಲ್ಲೂಕುಗಳಲ್ಲಿ ತೊಗರಿ ಸೇರಿದಂತೆ ಇತರೆ ಬೆಳೆಗಳು ಪ್ರವಾಹದಿಂದ ನಾಶವಾಗಿವೆ. ಪ್ರಾಥಮಿಕ ಸಮೀಕ್ಷೆ ಪ್ರಕಾರ 35ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿ ಮಾಹಿತಿ ಲಭ್ಯವಾಗಿದೆ.

ಕೃಷಿ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಿದ ಬಳಿಕ ಬೆಳೆ ಹಾನಿಯ ನಿಖರ ಮಾಹಿತಿ ಲಭ್ಯವಾಗಲಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಲಾನಿ ಎಚ್.ಮೊಕಾಶಿ ‘ಪ್ರಜಾವಾಣಿ’ಗೆ ತಿಳಿಸಿದರು. ಸೆಪ್ಟೆಂಬರ್‌ನಲ್ಲಿ 149ಮಿ.ಮೀ ವಾಡಿಕೆ ಮಳೆಯ ಬದಲು 235ಮಿ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT