ADVERTISEMENT

‘ಕಾಡಾ’, ‘ವಾಲ್ಮಿ’ ಪುನಶ್ಚೇತನ: ಕ್ರಿಯಾಯೋಜನೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2014, 19:34 IST
Last Updated 30 ಅಕ್ಟೋಬರ್ 2014, 19:34 IST

ಬೆಂಗಳೂರು: ನೀರಾವರಿ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರಗಳು (ಕಾಡಾ), ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)  ಹಾಗೂ ಕರ್ನಾಟಕ ಎಂಜಿನಿಯರಿಂಗ್‌ ಸಂಶೋಧನಾ ಕೇಂದ್ರಗಳ (ಕೆಇಆರ್‌ಎಸ್‌) ಪುನಶ್ಚೇತನಕ್ಕೆ ಸಮಗ್ರ ಕ್ರಿಯಾಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲ ಸಂಪನ್ಮೂಲ ಇಲಾಖೆಗೆ ಸೂಚಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಕಾಡಾ ಮತ್ತು ವಾಲ್ಮಿ ಕಾರ್ಯನಿರ್ವಹಣೆ ಕುರಿತು ಅಧ್ಯಯನ ನಡೆಸಲು ಇಲಾಖೆಯ ಹಿರಿಯ ಅಧಿಕಾರಿಗಳ ಎರಡು ತಂಡಗಳನ್ನು ರಚಿಸಲಾಗಿತ್ತು. ಈ ತಂಡದ ಸದಸ್ಯರು ಗುಜರಾತ್‌, ರಾಜಸ್ತಾನ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಿ ಅಧ್ಯಯನ ನಡೆಸಿದ್ದರು. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಿದ್ದರಾಮಯ್ಯ ಅವರಿಗೆ ಈ ಕುರಿತ ವರದಿಯನ್ನು ಸಲ್ಲಿಸಲಾಯಿತು.

ವರದಿ ಸ್ವೀಕರಿಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ, ‘ಅಧ್ಯಯನ ತಂಡಗಳು ಸಲ್ಲಿಸಿರುವ ವರದಿಯಲ್ಲಿ 40 ಶಿಫಾರಸುಗಳಿವೆ. ಈ ಶಿಫಾರಸುಗಳನ್ನು ಆಧರಿಸಿ ಕ್ರಿಯಾಯೋಜನೆ ರೂಪಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT