ಬೆಂಗಳೂರು: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಡಾ.ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾಸಂಕಲನ ಪ್ರಶಸ್ತಿ’ಗೆ ಲೇಖಕಿ ವಿಜಯಾ ಮೋಹನ್ ಅವರ ‘ಜಾತಿ’ ಕಥಾಸಂಕಲನವನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₨25 ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಜೂನ್ 8ರಂದು ಮಂಡ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಕೆ.ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.