ADVERTISEMENT

‘ಮೀನ್‌ಮೈಂಡೆಡ್‌’ ಚಿಂತನೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2015, 19:30 IST
Last Updated 5 ಜುಲೈ 2015, 19:30 IST

ಮೈಸೂರು:‘ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ‘ಬಡವರಿಗೆ ಮೀನು ಹಿಡಿಯುವುದನ್ನು ಕಲಿಸಬೇಕೇ ಹೊರತು, ಮೀನನ್ನು ನೀಡಬಾರದು’ ಎಂದು ಪ್ರತಿಕ್ರಿಯಿಸಿದ್ದಾರೆ.

ಮೀನು ತಿನ್ನದ ಇವರಿಗೆ ಮೀನಿನ ಚಿಂತೆ ಏಕೆ? ಇದು ‘ಮೀನ್‌ಮೈಂಡೆಡ್‌’ ಚಿಂತನೆ ಇರಬಹುದೇ? ಇದರಲ್ಲೇನೋ ‘ಫಿಶಿ’ ವಿಚಾರ ಇರುವಂತಿದೆಯಲ್ಲ?’ ಎಂದು ಚಿಂತಕ ಪ್ರೊ.ಜಿ.ಕೆ. ಗೋವಿಂದರಾವ್‌ ವ್ಯಂಗ್ಯವಾಡಿದರು.

ಬೆಂಗಳೂರಿನ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟ ಮತ್ತು ಮೈಸೂರಿನ ಡಾ.ಬಿ.ಆರ್. ಅಂಬೇಡ್ಕರ್‌ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದ ರಾಣಿ ಬಹದ್ದೂರ್‌ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ‘ಬಡತನ ಮತ್ತು ಹಸಿವಿನ ಪ್ರಶ್ನೆಗಳು’ ಕುರಿತ ರಾಜ್ಯಮಟ್ಟದ ವಿಚಾರಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

‘ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ, ಅಂತರ್ಜಾತಿ ವಿವಾಹಗಳ ಬಗ್ಗೆ ಟೀಕಿಸುತ್ತಾರೆ. ಮದುವೆಯೇ ಆಗದ ಅವರಿಗೆ ಬೇರೊಬ್ಬರ ಮದುವೆಯ ಬಗ್ಗೆ ಏಕೆ ಚಿಂತೆ?’ ಎಂದು ಚಟಾಕಿ ಹಾರಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.