ಬೆಂಗಳೂರು: ರಾಜ್ಯದಲ್ಲಿ 59,25,551 ಎಕರೆ ಜಮೀನಿಗೆ ನೀರಾವರಿ ಒದಗಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಸೋಮವಾರ ಕೆ.ಆರ್.ರಮೇಶ್ಕುಮಾರ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು ಬೃಹತ್ ಮತ್ತು ಮಧ್ಯಮ ನೀರಾವರಿ ಯೋಜನಾ ಕಾಮಗಾರಿಗಳಿಗೆ 2011–12ರಲ್ಲಿ ₨6789.95 ಕೋಟಿ, 2012–13ರಲ್ಲಿ ₨7044.28 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮೀಸಲಾಗಿಟ್ಟ ಪ್ರಮಾಣಕ್ಕೆ ಅನುಗುಣವಾಗಿ ನೀರಿನ ಹಂಚಿಕೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.