ADVERTISEMENT

30 ದಿನದಲ್ಲಿ ಶಂಕುಸ್ಥಾಪನೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2015, 10:46 IST
Last Updated 18 ಏಪ್ರಿಲ್ 2015, 10:46 IST
30 ದಿನದಲ್ಲಿ ಶಂಕುಸ್ಥಾಪನೆಗೆ ಒತ್ತಾಯ
30 ದಿನದಲ್ಲಿ ಶಂಕುಸ್ಥಾಪನೆಗೆ ಒತ್ತಾಯ   

ಬೆಂಗಳೂರು: ‘ಕರ್ನಾಟಕ ಬಂದ್‌’ ನಡೆಸುತ್ತಿರುವ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮೇಕೆದಾಟು ಯೋಜನೆಗೆ 30 ದಿನದಲ್ಲಿ ಶಂಕುಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿದರು.

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನೇತೃತ್ವದ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಈ ಭೇಟಿಗೂ ಮುನ್ನಾ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು.

ಕನ್ನಡ ಒಕ್ಕೂಟ ಕರೆ ನೀಡಿದ್ದ ಬಂದ್‌ಗೆ ದಕ್ಷಿಣ ಕರ್ನಾಟಕದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.