ADVERTISEMENT

41 ಸಾವಿರ ಸೀಟು ಹಂಚಿಕೆ

ಆರ್‌ಟಿಇ: ಸೋಮವಾರ ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆ

​ಪ್ರಜಾವಾಣಿ ವಾರ್ತೆ
Published 22 ಮೇ 2017, 19:30 IST
Last Updated 22 ಮೇ 2017, 19:30 IST
41 ಸಾವಿರ ಸೀಟು ಹಂಚಿಕೆ
41 ಸಾವಿರ ಸೀಟು ಹಂಚಿಕೆ   
ಬೆಂಗಳೂರು:  ‘ಶಿಕ್ಷಣ ಹಕ್ಕು ಕಾಯ್ದೆ’ಯಡಿ (ಆರ್‌ಟಿಇ) ಖಾಸಗಿ ಶಾಲೆಗಳಲ್ಲಿ  ಲಭ್ಯವಿರುವ 40,990 ಸೀಟುಗಳಿಗೆ ಸೋಮವಾರ ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆ ನಡೆಸಲಾಯಿತು.
 
ಈ ಪೈಕಿ ರಾತ್ರಿಯೊಳಗೆ 24,325 ಅರ್ಜಿಗಳಿಗೆ ಸಂಬಂಧಿಸಿದಂತೆ ಸೀಟು ಹಂಚಿಕೆಯ ಎಸ್‌ಎಂಎಸ್‌ ರವಾನೆಯಾಗಿದೆ. ಎರಡನೇ ಸುತ್ತಿನಲ್ಲಿ ಸೀಟು ಪಡೆದವರು ಇದೇ 31ರೊಳಗೆ ಆಯಾ ಶಾಲೆಗಳಲ್ಲಿ ಪ್ರವೇಶ ಪಡೆಯಬೇಕು. 
 
ಕಳೆದ ಏಪ್ರಿಲ್ 28ರಂದು ನಡೆದ ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ 96,908 ಸೀಟುಗಳನ್ನು ಹಂಚಿಕೆ ಮಾಡಲಾಗಿತ್ತು. ಅದರಲ್ಲಿ 86,854 ವಿದ್ಯಾರ್ಥಿಗಳು ವಿವಿಧ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದಾರೆ. 
 
ಎರಡನೇ ಸುತ್ತಿನ ಸೀಟುಗಳಿಗೆ ಹೊಸದಾಗಿ 5.440 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಹಿಂದಿನ ಅರ್ಜಿಗಳೂ ಒಳಗೊಂಡಂತೆ  ಒಟ್ಟು 1,10,625 ಅರ್ಜಿಗಳಲ್ಲಿ 41 ಸಾವಿರ ಸೀಟುಗಳು ಹಂಚಿಕೆಯಾಗಿವೆ.
 
ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಉಳಿಯುವ ಸೀಟುಗಳಿಗೆ ಜೂನ್‌ ಮೊದಲ ವಾರದಲ್ಲಿ ಮೂರನೇ ಹಂತದ ಲಾಟರಿ ನಡೆಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
****
ಶೇ 80ರಷ್ಟು ಪಠ್ಯ ಪುಸ್ತಕಗಳು ಮುದ್ರಣ
ಪಠ್ಯಪುಸ್ತಕಗಳ ಮುದ್ರಣ ಕಾರ್ಯ ಶೇ 80ರಷ್ಟು ಪೂರ್ಣಗೊಂಡಿದ್ದು, ಈಗಾಗಲೇ ಶಾಲೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತೆ ಸೌಜನ್ಯಾ ಹೇಳಿದರು.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್‌, ಸೈಕಲ್‌ಗಳನ್ನು ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಪಡೆಯಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.