ADVERTISEMENT

ದೀಪಕ್ ಹತ್ಯೆ: ಮಂಗಳೂರಿಗೆ ದೌಡಾಯಿಸಿದ ಎಡಿಜಿಪಿ ಕಮಲ್‌ ಪಂತ್

​ಪ್ರಜಾವಾಣಿ ವಾರ್ತೆ
Published 3 ಜನವರಿ 2018, 15:40 IST
Last Updated 3 ಜನವರಿ 2018, 15:40 IST
ಎಡಿಜಿಪಿ ಕಮಲ್‌ ಪಂತ್, ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್
ಎಡಿಜಿಪಿ ಕಮಲ್‌ ಪಂತ್, ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್   

ಬೆಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಬಳಿಕ ಯಾವುದೆ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ) ಕಮಲ್‌ ಪಂತ್ ಅವರು ಮಂಗಳೂರಿಗೆ ದೌಡಾಯಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿ ವಿವರ ಪಡೆದ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು, ಕೂಡಲೆ ಮಂಗಳೂರಿಗೆ ಧಾವಿಸುವಂತೆ ಕಮಲ್ ಪಂತ್‌ಗೆ ಸೂಚನೆ ನೀಡಿದರು.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ ತುಕಡಿಗಳನ್ನು ನಿಯೋಜಿಸಬೇಕು, ಶಾಂತಿಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರೆಡ್ಡಿ ಆದೇಶಿಸಿದ್ದಾರೆ.

ADVERTISEMENT

ಕೊಚ್ಚಿ ಕೊಲೆ

ಮಂಗಳೂರಿನ ‌ಸುರತ್ಕಲ್‌ ಸಮೀಪದ ಕೃಷ್ಣಾಪುರದಲ್ಲಿ ಬುಧವಾರ ಮಧ್ಯಾಹ್ನ ಬೈಕಿನಲ್ಲಿ ಹೋಗುತ್ತಿದ್ದ ಯುವಕ ಕಾಟಿಪಳ್ಳ ಕೈಕಂಬ ನಿವಾಸಿ ದೀಪಕ್‌ನನ್ನು ಕಾರಿನಲ್ಲಿ ಬೆನ್ನಟ್ಟಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಈತ ದೂರಸಂಪರ್ಕ ಕಂಪೆನಿಯೊಂದರ ಸಿಮ್ ವಿತರಕನಾಗಿದ್ದ. ಮಧ್ಯಾಹ್ನ 2ರ ಸುಮಾರಿಗೆ ಈತನನ್ನು ಕೊಲೆ‌ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.