ADVERTISEMENT

9ಕ್ಕೆ ವಿಟಿಯು ಘಟಿಕೋತ್ಸವ

​ಪ್ರಜಾವಾಣಿ ವಾರ್ತೆ
Published 3 ಜನವರಿ 2018, 19:30 IST
Last Updated 3 ಜನವರಿ 2018, 19:30 IST
ಎ.ಎಸ್‌. ಕಿರಣ್‌ ಕುಮಾರ್‌ ಹಾಗೂ ಆನಂದ ಮಹೀಂದ್ರ
ಎ.ಎಸ್‌. ಕಿರಣ್‌ ಕುಮಾರ್‌ ಹಾಗೂ ಆನಂದ ಮಹೀಂದ್ರ   

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವ, ಇದೇ 9ರಂದು ಇಲ್ಲಿ ನಡೆಯಲಿದೆ. ಅಂದು 74,193 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಕರಿಸಿದ್ದಪ್ಪ ಬುಧವಾರ ಇಲ್ಲಿ ತಿಳಿಸಿದರು.

‘ಚಿಕ್ಕಮಗಳೂರಿನ ಆದಿಚುಂಚನಗಿರಿ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿ ಎನ್‌.ಸಚಿನ್‌ ಕೀರ್ತಿ ಅತಿಹೆಚ್ಚು ಅಂಕ (ಶೇ 89.25) ಪಡೆಯುವುದರ ಮೂಲಕ ವಿಶ್ವವಿದ್ಯಾಲಯಕ್ಕೇ ಮೊದಲ ರ‍್ಯಾಂಕ್‌ ಪಡೆದಿದ್ದಾರೆ. 13 ಚಿನ್ನದ ಪದಕ ಪಡೆದಿದ್ದಾರೆ’ ಎಂದು ವಿವರಿಸಿದರು.

ರಾಜ್ಯಪಾಲ ವಜುಭಾಯಿ ವಾಲಾ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್‌ (ಎಐಸಿಟಿಇ) ಅಧ್ಯಕ್ಷ ಪ್ರೊ. ಅನಿಲ್‌ ಸಹಸ್ರಬುದ್ಧೆ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.

ADVERTISEMENT

ಗೌರವ ಡಾಕ್ಟರೇಟ್‌: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಎ.ಎಸ್‌. ಕಿರಣ್‌ ಕುಮಾರ್‌ ಹಾಗೂ ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ ಮಹೀಂದ್ರ ಅವರಿಗೆ ಗೌರವ ಡಾಕ್ಟರೇಟ್‌ ನೀಡಲಾಗುವುದು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.