ADVERTISEMENT

ರಾಘವೇಶ್ವರ ಭಾರತೀ ಶ್ರೀ ಆರೋಪ ಮುಕ್ತ ಆದೇಶ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಕೆ.ಎನ್.ಫಣೀಂದ್ರ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 9:48 IST
Last Updated 12 ಜನವರಿ 2018, 9:48 IST
ರಾಘವೇಶ್ವರ ಭಾರತೀ ಶ್ರೀ
ರಾಘವೇಶ್ವರ ಭಾರತೀ ಶ್ರೀ   

ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪದಲ್ಲಿ ರಾಘವೇಶ್ವರ ಭಾರತೀ ಶ್ರೀಗಳನ್ನು ಆರೋಪ ಮುಕ್ತ ಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಹಿಂದೆ ಸರಿದಿದ್ದಾರೆ.

‘ನಾಲ್ಕು ವರ್ಷಗಳ ಅವಧಿಯಲ್ಲಿ ಸ್ವಾಮೀಜಿ ನನ್ನ ಮೇಲೆ 154 ಬಾರಿ ಅತ್ಯಾಚಾರ ನಡೆಸಿದ್ದಾರೆ’ ಎಂದು ರಾಮಕಥಾ ಗಾಯಕಿ ಮಾಡಿದ್ದ ಆರೋಪ ಪ್ರಕರಣದಲ್ಲಿ ಸ್ವಾಮೀಜಿ ಖುಲಾಸೆಯಾಗಿದ್ದು, ಸೆಷನ್ಸ್‌ ನ್ಯಾಯಾಲಯದ ಈ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ಪ್ರಕರಣ ಸಂಬಂಧ ಏಕಸದಸ್ಯ ನ್ಯಾಯಪೀಠದ ಮುಂದಿರುವ ಈ ಮೇಲ್ಮನವಿ ವಿಚಾರಣೆ ಇಂದು(ಶುಕ್ರವಾರ) ನಿಗದಿಯಾತ್ತು.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.