ADVERTISEMENT

ಕಲಬುರ್ಗಿ: ಸಚಿವ ಅನಂತ ಕುಮಾರ ಹೆಗಡೆ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2018, 5:51 IST
Last Updated 17 ಜನವರಿ 2018, 5:51 IST
ಕಲಬುರ್ಗಿ: ಸಚಿವ ಅನಂತ ಕುಮಾರ ಹೆಗಡೆ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ
ಕಲಬುರ್ಗಿ: ಸಚಿವ ಅನಂತ ಕುಮಾರ ಹೆಗಡೆ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ   

ಕಲಬುರ್ಗಿ: ಸಂವಿಧಾನ ಬದಲಾಯಿಸಬೇಕು ಎಂದು ಹೇಳಿಕೆ ನೀಡಿರುವ ಸಚಿವ ಅನಂತ ಕುಮಾರ ಹೆಗಡೆ ಅವರ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳು ಬುಧವಾರ ಪ್ರತಿಭಟನೆ ಕೈಗೊಂಡಿವೆ.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್‌ಎಸ್‌ಎಸ್‌ ಸಂಘಟನೆ ವಿರುದ್ಧ ಘೋಷಣೆ ಕೂಗಿದ ದಲಿತ ಸಮನ್ವಯ ಸಮಿತಿ ಸಂಚಾಲಕ ವಿಠಲ ದೊಡ್ಡಮನಿ, ಲೇಖಕಿ ಕೆ.ನೀಲಾ ಅವರನ್ನು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಯಲಬುರ್ಗಾ ತಾಲ್ಲೂಕು ಕುಕನೂರಿನ ಮಹಾಮಾಯಿ ದೇವಸ್ಥಾನದಲ್ಲಿ ಬ್ರಾಹ್ಮಣ ಯುವ ಪರಿಷತ್ತಿನ ಮಹಿಳಾ ಸಂಘ, ವೆಬ್‌ಸೈಟ್ ಉದ್ಘಾಟನೆ ವೇಳೆ ಸಚಿವ ಅನಂತಕುಮಾರ್‌ ಹೆಗಡೆ ಅವರು 'ಜಾತ್ಯತೀತತೆ ಕುರಿತು ಸಂವಿಧಾನ ಹೇಳಿದೆ, ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ, ಸಂವಿಧಾನ ಕೂಡಾ ಕಾಲಕ್ಕೆ ತಕ್ಕಂತೆ ಎಷ್ಟೋ ಬಾರಿ ಬದಲಾಗಿದೆ. ಮುಂದಿನ ದಿನಗಳಲ್ಲೂ ಕೂಡ ಬದಲಾಗುತ್ತದೆ. ಆ ಸಂವಿಧಾನವನ್ನು ಬದಲಾಯಿಸುವುದಕ್ಕಾಗಿಯೇ ನಾವು ಇರುವುದು, ಬಂದಿರುವುದು' ಎಂದು  ಹೇಳಿದ್ದರು.

ADVERTISEMENT

ಇದನ್ನೂ ಓದಿ...

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.