ADVERTISEMENT

ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕನ ಬಂಧನ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 15:42 IST
Last Updated 18 ಜನವರಿ 2018, 15:42 IST
ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕನ ಬಂಧನ
ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕನ ಬಂಧನ   

ಕಲಬುರ್ಗಿ: ನಗರದ ವಿವಿಧ ಬಡಾವಣೆಗಳಲ್ಲಿ ದುಬಾರಿ ಕಾರುಗಳಿಗೆ ಬೆಂಕಿ ಹಚ್ಚಿ, ಕಾರುಗಳ ಮಾಲೀಕರ ನಿದ್ದೆಗೆಡಿಸಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಕಲಬುರ್ಗಿಯ ಎಂ.ಬಿ.ನಗರ ನಿವಾಸಿ, ಬೆಳಗಾವಿಯ ಬಿಮ್ಸ್ ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಅಮಿತ್ ಗಾಯಕವಾಡ ಬಂಧಿತರು. ಅಲ್ಲಿನ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರಿಗೆ ಬೆಂಕಿ ಹಚ್ಚುತ್ತಿದ್ದಾಗ, ಸ್ಥಳೀಯರ ನೆರವಿನೊಂದಿಗೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಇವರು ಕಲಬುರ್ಗಿಯ ಪ್ರತಿಷ್ಠಿತ ಮನೆತನಕ್ಕೆ ಸೇರಿದ್ದಾರೆ. ಜ.13ರಂದು ಎಂಟು ಕಾರು ಹಾಗೂ ಜ.14ರಂದು ಒಂದು ಸೇರಿ ಒಟ್ಟು 9 ಕಾರುಗಳಿಗೆ ಬೆಂಕಿ ಹಚ್ಚಿದ್ದರು ಇದರಲ್ಲಿ 5 ಕಾರುಗಳು ವೈದ್ಯರಿಗೆ ಸೇರಿವೆ. ಈ ಕುರಿತು ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ 6 ಹಾಗೂ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ 3 ಪ್ರಕರಣ ದಾಖಲಾಗಿದ್ದವು ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.