ADVERTISEMENT

ಸಿಇಟಿ: ಪೂರಕ ಪರೀಕ್ಷೆ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಾಳೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2018, 15:52 IST
Last Updated 30 ಜುಲೈ 2018, 15:52 IST
   

ಬೆಂಗಳೂರು: ದ್ವಿತೀಯ ಪಿಯು ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ, ಎರಡನೇ ಸುತ್ತಿನಲ್ಲಿ ಉಳಿದ ಸೀಟುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

‘ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳ ಅಂಕಗಳನ್ನು ನೇರವಾಗಿ ಇಲಾಖೆಯಿಂದ ಪಡೆಯಲಾಗುತ್ತದೆ. ಇತರೆ ಬೋರ್ಡ್‌ಗಳಿಂದ (ಸಿಬಿಎಸ್‌ಇ, ಸಿಐಎಸ್‌ಸಿಇ) 12ನೇ ತರಗತಿಯ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಸಿಇಟಿ ಪ್ರವೇಶ ಪತ್ರದೊಂದಿಗೆ ಪ್ರಾಧಿಕಾರಕ್ಕೆ ಆಗಸ್ಟ್ 1ರ ಮಧ್ಯಾಹ್ನ 1 ಗಂಟೆಯೊಳಗೆ ಸಲ್ಲಿಸಬೇಕು’ ಎಂದು ಹೇಳಿದೆ.

ಆಗಸ್ಟ್‌ 1 ಮತ್ತು 2ರಂದು ಎಲ್ಲಾ ಸಹಾಯಕ ಕೇಂದ್ರಗಳಲ್ಲಿ ದಾಖಲಾತಿ ಪರಿಶೀಲನೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ http://kea.kar.nic.in ವೀಕ್ಷಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.