ADVERTISEMENT

ಬರ ಪರಿಹಾರ ಬಿಡುಗಡೆ| ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ: ಡಿ.ಕೆ ಶಿವಕುಮಾರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಏಪ್ರಿಲ್ 2024, 10:01 IST
Last Updated 27 ಏಪ್ರಿಲ್ 2024, 10:01 IST
<div class="paragraphs"><p>ಡಿ.ಕೆ. ಶಿವಕುಮಾರ್‌</p></div>

ಡಿ.ಕೆ. ಶಿವಕುಮಾರ್‌

   

ಬೆಂಗಳೂರು: ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ.

ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. 'ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ರಾಜ್ಯ ಸರ್ಕಾರ ಕೇಳಿದ ₹18,172 ಕೋಟಿ ಬರಪರಿಹಾರದಲ್ಲಿ ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಬಿಡುಗಡೆ ಮಾಡುವ ಮೂಲಕ ಕನ್ನಡಿಗರು ಹಾಗೂ ಕರ್ನಾಟಕದ ರೈತರ ಮೇಲಿರುವ ತನ್ನ ದ್ವೇಷವನ್ನು ಮತ್ತೆ ನಿರೂಪಿಸಿದೆ' ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ADVERTISEMENT

'ರಾಜ್ಯದ ರೈತರು ಹಾಗೂ ಕನ್ನಡಿಗರ ಸ್ವಾಭಿಮಾನದ ರಕ್ಷಣೆಗಾಗಿ ಕಾಂಗ್ರೆಸ್‌ ಸರ್ಕಾರ ಎಷ್ಟೇ ದೊಡ್ಡ ಸವಾಲುಗಳನ್ನಾದರೂ ಸ್ವೀಕರಿಸಲು ಸಿದ್ಧವಿದೆ. ನಾವು ಕೇಳುತ್ತಿರುವುದು ಕನ್ನಡಿಗರ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ' ಎಂದಿದ್ದಾರೆ.

ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.