ADVERTISEMENT

ಪ್ರತಿಭಟನೆ ವೇಳೆ ವಿಷ ಕುಡಿದ ರೈತ

​ಪ್ರಜಾವಾಣಿ ವಾರ್ತೆ
Published 16 ಜುಲೈ 2018, 18:14 IST
Last Updated 16 ಜುಲೈ 2018, 18:14 IST

ಮಂಡ್ಯ: ರೇಷ್ಮೆ ಬೆಳೆಗಾರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ರೇಷ್ಮೆ ಬೆಳೆಗಾರರ ಒಕ್ಕೂಟದ ಸದಸ್ಯರು ಸೋಮವಾರ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸುತ್ತಿದ್ದಾಗ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು.

ಮದ್ದೂರು ತಾಲ್ಲೂಕು ಅಂಬರಹಳ್ಳಿ ರೈತ ಚೌಡೇಗೌಡ (35) ಪೊಲೀಸ್ ಅಧಿಕಾರಿಗಳ ಎದುರೇ ವಿಷ ಸೇವಿಸಿದರು. ತಕ್ಷಣ ಹತ್ತಿರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಅಪಾಯದಿಂದ ಪಾರಾದರು.

ಎರಡು ತಿಂಗಳುಗಳಿಂದ ರೇಷ್ಮೆ ಗೂಡಿನ ಬೆಲೆ ಕೆ.ಜಿ.ಗೆ ₹ 150–200ಕ್ಕೆ ಕುಸಿದಿದೆ. ಪ್ರತಿ ಕೆ.ಜಿ.ಗೆ ₹500 ದರ ನಿಗದಿ ಮಾಡುವಂತೆ ಹಾಗೂ ವಿದೇಶಿ ರೇಷ್ಮೆ ಆಮದು ಸುಂಕ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.