ADVERTISEMENT

ಉತ್ತರ ಕರ್ನಾಟಕಕ್ಕೆ ಅನ್ಯಾಯ: ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ

​ಪ್ರಜಾವಾಣಿ ವಾರ್ತೆ
Published 6 ಜುಲೈ 2018, 11:18 IST
Last Updated 6 ಜುಲೈ 2018, 11:18 IST

ಹುಬ್ಬಳ್ಳಿ: ಬಜೆಟ್‌ನಲ್ಲಿ ರಾಜ್ಯದ ಉತ್ತರ ಭಾಗಕ್ಕೆ ಅನ್ಯಾಯವಾಗಿದೆ. ಆದ್ದರಿಂದ, ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ ಆರಂಭಿಸಲಾಗುವುದು ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಕರಿಗಾರ ಹೇಳಿದರು.

ಜುಲೈ 9ಕ್ಕೆ ಗದಗ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಆಗಸ್ಟ್‌ 2 ರಂದು ಬೆಳಗಾವಿಯ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಲಾಗುವುದು. ಆ ನಂತರ ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ಪ್ರತಿಭಟನೆ ಮಾಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದಕ್ಷಿಣ ಕರ್ನಾಟಕ್ಕೆ ಹಲವಾರು ಯೋಜನೆಗಳನ್ನು ಪ್ರಕಟಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ನಿರ್ಲಕ್ಷಿಸಲಾಗಿದೆ. ಕಳಸಾ ಬಂಡೂರಿ ಹೋರಾಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿವೆ. ಅನ್ಯಾಯವನ್ನು ಸರಿಪಡಿಸದಿದ್ದರೆ, ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ADVERTISEMENT

ಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲ ಮಾಡಿಲ್ಲ. ಬರಗಾಲದಿಂದ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅದ್ದರಿಂದ, ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಅಗ್ರಹಿಸಿದರು.

ಸಂಘದ ಉಪಾಧ್ಯಕ್ಷ ಸೋಮಶೇಖರ ದೊಡಮನಿ, ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವಪ್ಪ ಹುರಳಿಗಟ್ಟಿ, ರೋಣ ತಾಲ್ಲೂಕು ಘಟಕದ ಅಧ್ಯಕ್ಷ ವೀರನಗೌಡ ಪಾಟೀಲ, ಈರಪ್ಪ ಕುಸುಗಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.