ADVERTISEMENT

ಖಂಡ್ರೆ, ಶ್ರೀನಾಥ್ ಸೇರಿ ಐವರಿಗೆ ಮುರುಘಾಶ್ರೀ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2018, 19:56 IST
Last Updated 2 ಅಕ್ಟೋಬರ್ 2018, 19:56 IST
   

ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡುವ ಮುರುಘಾ ಶ್ರೀ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಐವರನ್ನು ಆಯ್ಕೆ ಮಾಡಲಾಗಿದೆ.

‘ಸಮುದಾಯ ಸಂಘಟನೆಯಲ್ಲಿ ಖ್ಯಾತರಾಗಿರುವ ಮಾಜಿ ಶಾಸಕ ಭೀಮಣ್ಣ ಖಂಡ್ರೆ, ನಟ ಶ್ರೀನಾಥ್, ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಸಾಹಸ ಶಿಕ್ಷಣ ನೀಡುತ್ತಿರುವ ನೊಮಿಟೊ ಕಾಮದಾರ್‌ ಮತ್ತು ಡಾ.ಎಸ್‌.ಎಲ್‌.ಎನ್‌.ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಸಿದ್ದು ನ್ಯಾಮೇಗೌಡ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ’ ಎಂದು ಶಿವಮೂರ್ತಿ ಮುರುಘಾ ಶರಣರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಭರಮಣ್ಣನಾಯಕ ಶೌರ್ಯ ಪ್ರಶಸ್ತಿಗೆ ಹರಿಯಾಣದ ಬಾಲ ಪ್ರತಿಭೆ ಕೌಟಿಲ್ಯ ಪಂಡಿತ್‌ ಅವರನ್ನು ಆಯ್ಕೆ ಮಾಡಲಾಗಿದೆ. ಮುರುಘಾಶ್ರೀ ಮತ್ತು ಶೌರ್ಯ ಪ್ರಶಸ್ತಿಯು ₹ 25 ಸಾವಿರ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಅ.16ರಂದು ಮುರುಘಾಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.