ADVERTISEMENT

News Express | ಮುಡಿ ಕೊಡಲು ಹೋಗಿದ್ದ ಪ್ರತಿಮಾ ಕೊಲೆ ಆರೋಪಿ

ಪ್ರಜಾವಾಣಿ ವಿಶೇಷ
Published 6 ನವೆಂಬರ್ 2023, 14:40 IST
Last Updated 6 ನವೆಂಬರ್ 2023, 14:40 IST

ಹಿರಿಯ ಭೂ ವಿಜ್ಞಾನಿ ಕೆ.ಎಸ್. ಪ್ರತಿಮಾ ಅವರ ಕೊಲೆ ಆರೋಪಿ ಕಿರಣ್‌ನನ್ನು ದಕ್ಷಿಣ ವಿಭಾಗದ ಪೊಲೀಸರು ಚಾಮರಾಜನಗರದ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಬಂಧಿಸಿದ್ದಾರೆ. ಜಂಬೂ ಸವಾರಿ ದಿಣ್ಣೆಯ ನಿವಾಸಿ ಕಿರಣ್, ಪ್ರತಿಮಾ ಬಳಿ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಈತನನ್ನು ಹಲವು ದಿನಗಳ ಹಿಂದೆ ಕೆಲಸದಿಂದ ತೆಗೆಯಲಾಗಿತ್ತು. ವಾಪಸು ಕೆಲಸಕ್ಕೆ ತೆಗೆದುಕೊಳ್ಳುವಂತೆ ಪ್ರತಿಮಾ ಅವರ ಬೆನ್ನು ಬಿದ್ದಿದ್ದ. ಆದರೆ, ಪ್ರತಿಮಾ ಕೆಲಸಕ್ಕೆ ತೆಗೆದುಕೊಂಡಿರಲಿಲ್ಲ. ಅದೇ ಕಾರಣಕ್ಕೆ‌ ಕೋಪಗೊಂಡು ಆರೋಪಿ ಕೃತ್ಯ ಎಸಗಿದ್ದನೆಂದು ಪೊಲೀಸರು ಹೇಳಿದರು. ಶನಿವಾರ ರಾತ್ರಿ ಕೊಲೆ‌ ಮಾಡಿದ್ದ ಈತ, ಮುಡಿ ಕೊಡಲು ಮಲೆ‌ ಮಹದೇಶ್ವರ ಬೆಟ್ಟಕ್ಕೆ ಸ್ನೇಹಿತರ ಜೊತೆ ಹೋಗಿದ್ದ. ಭಾನುವಾರ ಮಧ್ಯಾಹ್ನವೇ ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ಪೊಲೀಸರು, ಕಿರಣ್‌ನನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು. ಇದರೊಂದಿಗೆ, ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.