ADVERTISEMENT

ಸಂತ್ರಸ್ತರಿಗೆ ಮುಜರಾಯಿ ಇಲಾಖೆಯಿಂದ ₹19 ಕೋಟಿ ನೆರವು: ಸಚಿವ ರಾಜಶೇಖರ ಪಾಟೀಲ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2018, 12:33 IST
Last Updated 23 ಆಗಸ್ಟ್ 2018, 12:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಹಾಪುರ (ಯಾದಗಿರಿ):‘ಈ ಹಿಂದೆ ಪ್ರಕೃತಿ ವಿಕೋಪಕ್ಕೆ ರಾಜ್ಯದ ಜನರು ಸಿಲುಕಿದಾಗ ದೇಗುಲಗಳ ಹುಂಡಿಗಳನ್ನು ಸದ್ಬಳಕೆ ಮಾಡಿಕೊಳ್ಳಲಾಗಿದೆ. ಅದೇ ರೀತಿಯಲ್ಲಿ ಈಗ ದೇಗುಲಗಳ ಹುಂಡಿಗಳನ್ನು ಕೊಡಗು ಜನರ ಸಂಕಷ್ಟಕ್ಕೆ ಬಳಸಿಕೊಳ್ಳಲಾಗುತ್ತಿದೆ. ಹುಂಡಿ ಬಳಕೆ ವಿಷಯದಲ್ಲಿ ಯಾರೂ ಗೊಂದಲ ಸೃಷ್ಟಿಸಬಾರದು’ ಎಂದು ಗಣಿ, ಭೂವಿಜ್ಞಾನ ಮತ್ತು ಮುಜರಾಯಿ ಸಚಿವ ರಾಜಶೇಖರ ಪಾಟೀಲ ಹೇಳಿದರು.

ಖಾಸಗಿ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಶಹಾಪುರಕ್ಕೆ ಗುರುವಾರ ಆಗಮಿಸಿದಾಗ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 35,510 ದೇಗುಲಗಳಿವೆ. ಕೊಡಗು ಜಿಲ್ಲೆಯ ನೆರೆ ಪೀಡಿತರಿಗೆ ಮುಜರಾಯಿ ಇಲಾಖೆಯಿಂದ ₹12.31 ಕೋಟಿ, ಗಣಿ ಇಲಾಖೆಯಿಂದ ₹5 ಕೋಟಿ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದಿಂದ ₹2 ಕೋಟಿ ಸೇರಿ ಒಟ್ಟು ₹19.31 ಕೋಟಿ ಆರ್ಥಿಕ ನೆರವು ನೀಡಲಾಗುವುದು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.