ADVERTISEMENT

ಅಫ್ಗಾನಿಸ್ತಾನ: ಆತ್ಮಾಹುತಿ ಕಾರ್ ಬಾಂಬ್ ದಾಳಿಗೆ 35 ಬಲಿ

ಏಜೆನ್ಸೀಸ್
Published 24 ಜುಲೈ 2017, 11:29 IST
Last Updated 24 ಜುಲೈ 2017, 11:29 IST
ಕಾರ್ ಬಾಂಬ್ ದಾಳಿಯ ಪರಿಣಾಮ ಕಟ್ಟಡಗಳಿಗೆ ಹಾನಿಯಾಗಿರುವುದು
ಕಾರ್ ಬಾಂಬ್ ದಾಳಿಯ ಪರಿಣಾಮ ಕಟ್ಟಡಗಳಿಗೆ ಹಾನಿಯಾಗಿರುವುದು   

ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿಯಲ್ಲಿ ಸೋಮವಾರ ಸಂಭವಿಸಿದ ಆತ್ಮಾಹುತಿ ಕಾರ್‌ ಬಾಂಬ್ ಸ್ಫೋಟದಲ್ಲಿ ಕನಿಷ್ಠ 35 ಜನ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಯಾ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶದಲ್ಲಿ ದಾಳಿ ನಡೆದಿದೆ. ಘಟನಾ ಸ್ಥಳವನ್ನು ಪೊಲೀಸರು ಸುತ್ತುವರಿದಿದ್ದಾರೆ.

ನ್ಯಾಟೊ ಮತ್ತು ಅಫ್ಗಾನಿಸ್ತಾನದ ಸರ್ಕಾರಿ ಪಡೆಗಳ ವಿರುದ್ಧ ಸೆಣಸುತ್ತಿರುವ ತಾಲಿಬಾನ್ ಉಗ್ರ ಸಂಘಟನೆ ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ದಾಳಿ ನಡೆಸುವುದನ್ನು ಹೆಚ್ಚಿಸಿದೆ.

ADVERTISEMENT

ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬಿಯುಲ್ಲಾ ಮುಜಾಹಿದ್ ದಾಳಿಯ ಹೊಣೆಹೊತ್ತಿದ್ದು, 37 ಗುಪ್ತಚರರನ್ನು ಹತ್ಯೆ ಮಾಡಲಾಗಿದೆ ಎಂದು ಟ್ವಿಟರ್‌ನಲ್ಲಿ ಸಂದೇಶ ಪ್ರಕಟಿಸಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.