ADVERTISEMENT

ಅಫ್ಘಾನ್‌ನಲ್ಲಿ ನಾಲ್ವರು ತಾಲಿಬಾನಿ ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಮೇ 2015, 11:37 IST
Last Updated 27 ಮೇ 2015, 11:37 IST

ಕಾಬೂಲ್(ಎಪಿ): ಅಫ್ಘಾನಿಸ್ತಾನದ ರಾಜಧಾನಿಯಲ್ಲಿ ಮನೆಯೊಂದನ್ನು ವಶದಲ್ಲಿಟ್ಟುಕೊಂಡಿದ್ದ ತಾಲಿಬಾನಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಮಂಗಳವಾರ ಇಡೀರಾತ್ರಿ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ.

ಇಡೀ ರಾತ್ರಿ ನಡೆದ ಬಾರಿ ಗುಂಡಿನ ದಾಳಿಯಲ್ಲಿ ನಾಲ್ವರು ತಾಲಿಬಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ. ಘಟನೆಯಲ್ಲಿ ನಾಗರಿಕರು ಹಾಗೂ ಸಿಬ್ಬಂದಿ ಗಾಯಗೊಂಡಿದ್ದಾರೆ. ಉಗ್ರರಿಂದ ಗ್ರೆನೆಡ್, ರಾಕೆಟ್ ಉಡಾವಣಾ ಸಾಧನ ಹಾಗೂ ಮೂರು ಸ್ವಯಂಚಾಲಿತ ಬಂದೂಕುಗಳು ಸೇರಿದಂತೆ ಮದ್ದು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಫ್ಘಾನಿಸ್ತಾನದ ಆಂತರಿಕ ಉಪ ಸಚಿವ ಮೊಹಮ್ಮದ್ ಆಯೂಬ್ ಅವರು ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಿದ್ದಾರೆ.

ತಡರಾತ್ರಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಆರು ತಾಸು ಗುಂಡಿನ ದಾಳಿ ನಡೆದಿದ್ದು, ಈ ವೇಳೆ ನಾಲ್ವರು ತಾಲಿಬಾನಿ ಉಗ್ರರು ಹತ್ಯೆಯಾಗಿದ್ದಾರೆ ಎಂದು ಕಾಬುಲ್ ಪೊಲೀಸ್ ಮುಖ್ಯಸ್ಥ ಅಬ್ದುಲ್ ರಹಮಾನ್ ರಹೀಮ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT