ವಾಷಿಂಗ್ಟನ್ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಕಾಂಗ್ರೆಸ್ನ ಜಂಟಿ ಸದನವನ್ನುದ್ದೇಶಿಸಿ ಮಾತನಾಡಬೇಕು ಎಂದು ಅಲ್ಲಿನ ನಾಲ್ವರು ಹಿರಿಯ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದ್ದಾರೆ. ಅವರು ಸೆನೆಟ್ನಲ್ಲಿ ಈ ಬಗ್ಗೆ ನಿರ್ಣಯವನ್ನೂ ಮಂಡಿಸಿದ್ದಾರೆ.
ಸ್ಥಿರತೆ, ಪ್ರಜಾತಂತ್ರ ಮತ್ತು ಆರ್ಥಿಕ ಸಮೃದ್ಧಿಗೆ ಅಮೆರಿಕ ಮತ್ತು ಭಾರತದ ನಡುವಣ ರಾಜತಾಂತ್ರಿಕ ಸಹಭಾಗಿತ್ವಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯ ಇದೆ ಎಂದು ಸೆನೆಟರ್ಗಳಾದ ಮಾರ್ಕ್ ವಾರ್ನರ್, ಜಾನ್ ಕಾರ್ನಿನ್, ಟಿಮ್ ಕೈನ್ ಮತ್ತು ಜಿಮ್ ರಿಷ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.