ಕಾಬೂಲ್ (ಏಜೆನ್ಸೀಸ್): ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಪಶ್ಚಿಮ ಭಾಗದಲ್ಲಿ ಬುಧವಾರ ನಡೆದಿರುವ ಆತ್ಮಹತ್ಯಾ ದಾಳಿಯಲ್ಲಿ 10 ಮಂದಿ ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಸ್ಥಳೀಯ ನ್ಯಾಯಾಲಯದ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ನಲ್ಲಿ ಈ ದಾಳಿ ನಡೆದಿದೆ.
ಘಟನೆಯಲ್ಲಿ ಹತ್ತು ಮಂದಿ ಮೃತಪಟ್ಟಿರುವುದನ್ನು ಆಫ್ಘಾನಿಸ್ತಾನದ ಆಂತರಿಕ ಸಚಿವಾಲಯ ಸ್ಪಷ್ಟಪಡಿಸಿದೆ. ಯಾವ ಭಯೋತ್ಪಾದನಾ ಸಂಘಟನೆಯೂ ಈವರೆಗೆ ದಾಳಿಯ ಹೊಣೆ ಹೊತ್ತಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.