ADVERTISEMENT

ಇಮ್ರಾನ್‌, ತಾಹಿರುಲ್‌ ಆಸ್ತಿ ವಶಕ್ಕೆ ಆದೇಶ

ಪಿಟಿಐ
Published 14 ಜುಲೈ 2017, 19:30 IST
Last Updated 14 ಜುಲೈ 2017, 19:30 IST

ಇಸ್ಲಾಮಾಬಾದ್‌: ಪಾಕಿಸ್ತಾನ ತೆಹ್ರಿಕ್‌ ಎ–ಇನ್ಸಾಫ್‌ ಪಕ್ಷದ ಅಧ್ಯಕ್ಷ ಇಮ್ರಾನ್‌ ಖಾನ್‌ ಮತ್ತು ಪಾಕಿಸ್ತಾನ ಅವಾಮಿ ತೆಹ್ರಿಕ್‌ ಮುಖ್ಯಸ್ಥ ತಾಹಿರುಲ್‌ ಖಾದ್ರಿ ಅವರ ಆಸ್ತಿಯನ್ನು ವಶಪಡಿಸಿಕೊಳ್ಳುವಂತೆ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ (ಎಟಿಸಿ) ಆದೇಶಿಸಿದೆ.

ಇಮ್ರಾನ್‌ ಮತ್ತು ತಾಹಿರುಲ್‌ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆಗೆ ಹಾಜರಾಗಲು ವಿಫಲರಾಗಿದ್ದರಿಂದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

‘ಆದೇಶವನ್ನು ಜಾರಿಗೊಳಿಸುವಂತೆ ಸಂಬಂಧಪಟ್ಟ ಪೊಲೀಸ್‌ ಠಾಣೆ ಮತ್ತು ಕಂದಾಯ ಇಲಾಖೆಗೆ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ’ ಎಂದು ವಕೀಲರೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.