ADVERTISEMENT

ಉಬರ್‌ ವಿರುದ್ಧ ಅಮೆರಿಕ ಕೋರ್ಟ್‌ನಲ್ಲಿ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2015, 19:30 IST
Last Updated 30 ಜನವರಿ 2015, 19:30 IST

ನ್ಯೂಯಾರ್ಕ್‌ (ಪಿಟಿಐ): ನವದೆಹಲಿಯಲ್ಲಿ ಕಳೆದ ತಿಂಗಳು ಕಾರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಬರ್‌ ಟ್ಯಾಕ್ಸಿ ಸೇವಾ ಸಂಸ್ಥೆ ವಿರುದ್ಧ  ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ.

ಕ್ಯಾಲಿಫೋರ್ನಿಯಾದ ಫೆಡರಲ್‌ ನ್ಯಾಯಾಲಯದಲ್ಲಿ ಮಹಿಳೆಯೊಬ್ಬರು 36 ಪುಟಗಳ ದೂರು ಸಲ್ಲಿಸಿದ್ದು, ಉಬರ್‌ ಸಂಸ್ಥೆಯ ನಿರ್ಲಕ್ಷ್ಯದ ಬಗ್ಗೆ ಆರೋಪಿಸಿದ್ದಾರೆ.

ಉಬರ್‌ನ ಕಾರು ಚಾಲಕ ಶಿವಕುಮಾರ್‌ ಡಿ.5ರಂದು 25 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದ. ಅಮೆರಿಕ ಮೂಲದ ಉಬರ್ ಸಂಸ್ಥೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಚಾಲಕರು ಪ್ರಯಾಣಿಕರೊಂದಿಗೆ ಯಾವ ರೀತಿ ವರ್ತಿ­ಸುತ್ತಾರೆ ಎಂಬ ಬಗ್ಗೆ ಗಮನಹರಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.