ADVERTISEMENT

ಎನ್‌ಎಸ್‌ಜಿ ಸದಸ್ಯತ್ವ ಕೈಜೋಡಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಮೇ 2016, 19:41 IST
Last Updated 26 ಮೇ 2016, 19:41 IST

ಬೀಜಿಂಗ್‌ (ಪಿಟಿಐ): ಪರಮಾಣು ಪೂರೈಕೆದಾರರ ಗುಂಪಿನ (ಎನ್‌ಎಸ್‌ಜಿ) ಸದಸ್ಯತ್ವ ಪಡೆಯುವ ಭಾರತದ ಪ್ರಯತ್ನದಲ್ಲಿ ಧನಾತ್ಮಕ ಪಾತ್ರ ವಹಿಸುವಂತೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಚೀನಾವನ್ನು ಒತ್ತಾಯಿಸಿದರು.

ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಇಲ್ಲಿ ಮಾತುಕತೆ ನಡೆಸಿದ ಪ್ರಣವ್‌, ಭಯೋತ್ಪಾದನೆ ನಿಗ್ರಹಕ್ಕೆ ವಿಶ್ವಸಂಸ್ಥೆಯಂತಹ ಜಾಗತಿಕ ವೇದಿಕೆಯಲ್ಲಿ ಭಾರತದೊಂದಿಗೆ ಕೈಜೋಡಿಸುವಂತೆ ಕರೆ ನೀಡಿದರು.

ಭಯೋತ್ಪಾದನೆಯಲ್ಲಿ ಒಳ್ಳೆಯದು, ಕೆಟ್ಟದು ಎಂಬ ವ್ಯತ್ಯಾಸವಿಲ್ಲ ಎಂಬುದನ್ನು   ಸ್ಪಷ್ಟಪಡಿಸಲು ಬಯಸುವುದಾಗಿ ಅವರು ಹೇಳಿದರು. ಅಧ್ಯಕ್ಷರ ಜತೆಗಿನ ಮಾತುಕತೆ ನಂತರ  ನಿಯೋಗ ಮಟ್ಟದ ಚರ್ಚೆಯಲ್ಲೂ ಪ್ರಣವ್‌ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.