ADVERTISEMENT

ಐಎಸ್‌ ಉಗ್ರರ ವಶದಲ್ಲಿದ್ದ ಮೂರು ಜಿಲ್ಲೆಗಳು ಮರುವಶ

ಏಜೆನ್ಸೀಸ್
Published 23 ಆಗಸ್ಟ್ 2017, 19:30 IST
Last Updated 23 ಆಗಸ್ಟ್ 2017, 19:30 IST

ತಾಲ್‌ ಅಬ್ಟಾ, ಇರಾಕ್‌ (ಎಎಫ್‌ಪಿ): ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರರ ವಶದಲ್ಲಿದ್ದ ಮೂರು ಜಿಲ್ಲೆಗಳನ್ನು ಇರಾಕ್‌ ಪಡೆಗಳು ಬುಧವಾರ ಮರು
ವಶಪಡಿಸಿಕೊಂಡಿವೆ.

ಅಮೆರಿಕ ನೇತೃತ್ವದ ಮಿತ್ರಪಡೆಗಳು ಐಎಸ್‌ ವಿರುದ್ಧ ತಾಲ್‌ ಅಫರ್‌ನಲ್ಲಿ ಕಳೆದ ಎರಡು ದಿನಗಳಿಂದ ಸತತವಾಗಿ ನಡೆಸುತ್ತಿರುವ ಕಾರ್ಯಾಚರಣೆಯಿಂದಾಗಿ ಸಾವಿರಾರು ಜನರು ಜಿಲ್ಲೆ ತೊರೆದಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಪ್ರಧಾನಿ ಹೈದರ್‌ ಅಲ್‌–ಅಬಾದಿ ಮತ್ತು ಅಮೆರಿಕ ರಕ್ಷಣಾ ಸಚಿವ ಜಿಮ್‌ ಮ್ಯಾಟಿಸ್‌ ಅವರು ಬಾಗ್ದಾದ್‌ನಲ್ಲಿ ಸಭೆ ನಡೆಸಿದ ಬಳಿಕ ಈ ವಿಷಯವನ್ನು ಖಚಿತಪಡಿಸಿದ್ದಾರೆ.

ADVERTISEMENT

‘ಉಗ್ರರಿಂದ ನಗರಗಳು ವಿಮೋಚನೆಗೊಂಡಿವೆ. ಜನರು ಈಗ ಸ್ವತಂತ್ರರಾಗಿದ್ದಾರೆ’ ಎಂದು ಜಿಮ್‌ ಮ್ಯಾಟಿಸ್‌ ಹೇಳಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.