ADVERTISEMENT

ಐಎಸ್‌ ವಿರುದ್ಧದ ದಾಳಿ 27 ನಾಗರಿಕರ ಸಾವು

ಏಜೆನ್ಸೀಸ್
Published 21 ಆಗಸ್ಟ್ 2017, 19:30 IST
Last Updated 21 ಆಗಸ್ಟ್ 2017, 19:30 IST

ಬೈರೂತ್‌: ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರರ ವಶದಲ್ಲಿರುವ ಸಿರಿಯಾದ ರಾಕ ನಗರದಲ್ಲಿ ಅಮೆರಿಕ ನೇತೃತ್ವದ ಮಿತ್ರ ಪಡೆಗಳು ನಡೆಸಿದ ದಾಳಿಯಲ್ಲಿ 27 ನಾಗರಿಕರು ಮೃತಪಟ್ಟಿದ್ದಾರೆ ಎಂದು ಸಿರಿಯಾದ ಮಾನವಹಕ್ಕುಗಳ ನಿಗಾ ಸಮಿತಿ ತಿಳಿಸಿದೆ.

ಹೆಚ್ಚು ಜನಸಂಖ್ಯೆ ಹೊಂದಿರುವ ನಗರದ ಕೇಂದ್ರ ಪ್ರದೇಶ ಅಲ್‌–ಬಡುವಿನಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟವರ ಪೈಕಿ ಏಳು ಮಕ್ಕಳಿದ್ದಾರೆ ಎಂದು ಮಾನವ
ಹಕ್ಕುಗಳ ನಿಗಾ ಸಮಿತಿಯ ನಿರ್ದೇಶಕ ರಾಮಿ ಅಬ್ದುಲ್‌ ರೆಹಮಾನ್‌ ತಿಳಿಸಿದ್ದಾರೆ.

ನಾಗರಿಕರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಿತ್ರ ಪಡೆಗಳು ಹೇಳಿವೆ. ಆದರೆ, 2014ರಿಂದ ಇಲ್ಲಿಯವರೆಗೆ ಸಿರಿಯಾ ಮತ್ತು ಇರಾಕ್‌ನಲ್ಲಿ ನಡೆದ ದಾಳಿಯಲ್ಲಿ 624 ನಾಗರಿಕರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ದೇಶ ತೊರೆದಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಭಾನುವಾರದ ದಾಳಿಯಲ್ಲಿ ಸತ್ತವರು ಸೇರಿದಂತೆ ಒಟ್ಟು 125 ನಾಗರಿಕರು ಮೃತಪಟ್ಟಿದ್ದಾರೆ ಎಂದು ಬ್ರಿಟನ್‌ ಮೂಲದ ನಿಗಾ ಸಮಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.