ADVERTISEMENT

‘ಕಲುಷಿತ ನೀರು ಕುಡಿಯಲು ವಿದ್ಯಾರ್ಥಿಗಳ ಮೇಲೆ ಒತ್ತಡ’

ಪಿಟಿಐ
Published 21 ಆಗಸ್ಟ್ 2017, 19:30 IST
Last Updated 21 ಆಗಸ್ಟ್ 2017, 19:30 IST

ಢಾಕಾ: ಶಿಕ್ಷಕಿಯೊಬ್ಬರು 28 ವಿದ್ಯಾರ್ಥಿಗಳಿಗೆ ಕಲುಷಿತ ನೀರು ಕುಡಿಯುವಂತೆ ಒತ್ತಾಯಿಸಿದ ಪ್ರಕರಣ ಕುರಿತು ಬಾಂಗ್ಲಾದೇಶದ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

ಢಾಕಾದ ದಕ್ಷಿಣ ಭಾಗ ಜಜಿರಾದ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಹ್ನಾಜ್‌ ಪರ್ವಿನ್‌ ಶಿಕ್ಷೆಯಾಗಿ ವಿದ್ಯಾರ್ಥಿಗಳಿಗೆ ಕಲುಷಿತ ನೀರು ಕುಡಿಯುವಂತೆ ಒತ್ತಾಯಪಡಿಸಿದ ಆರೋಪ ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳ ಪೋಷಕರು ಶಿಕ್ಷಕಿ ವಿರುದ್ಧ ದೂರು ನೀಡಿದ್ದಾರೆ.

‘ನಿಯಮ ಉಲ್ಲಂಘಿಸಿರುವುದು ಸಾಬೀತಾದರೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಆಡಳಿತಾಧಿಕಾರಿ ರಹೇಲಾ ರಹಮತುಲ್ಲಾಹ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.